ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯ: ಭಾರತಕ್ಕೆ 15 ರನ್ ಗಳ ಜಯ

ಒಡಿಶಾದ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 15 ರನ್ ಗಳ ಜಯ ಗಳಿಸಿದೆ.

ಇಂಗ್ಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯ: ಭಾರತಕ್ಕೆ 15 ರನ್ ಗಳ ಜಯ
Published On :
ಕಟಕ್: ಒಡಿಶಾದ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 15 ರನ್ ಗಳ ಜಯ ಗಳಿಸಿದೆ. 
ಶತಕ ಸಿಡಿಸಿದ ಇಂಗ್ಲೆಂಡ್ ನಾಯಕ ಇಯಾನ್‌ ಮಾರ್ಗನ್‌ ಏಕಾಂಗಿ ಹೋರಾಟ ವ್ಯರ್ಥವಾಗಿದ್ದು, ಇಂಗ್ಲೆಂಡ್ ತಂಡಕ್ಕೆ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 366 ರನ್ ಗಳಿಸುವುದಕ್ಕೆ ಸಾಧ್ಯವಾಯಿತು. 
ಭಾರತ ನೀಡಿದ್ದ 382 ರನ್ ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 28 ರನ್ ಗಳಿಗೆ ಹೇಲ್ಸ್ ವಿಕೆಟ್ ಕಳೆದುಕೊಂಡು ಆರಂಭಿಕ ಅಘಾತ ಎದುರಿಸಿತಾದರೂ, ಆರಂಭಿಕ ಆಟಗಾರ ಜಾಸನ್ ರಾಯ್, ರೂಟ್ ಅವರ 100 ರನ್ ಗಳ ಜತೆಯಾಟದಲ್ಲಿ ಚೇತರಿಸಿಕೊಂಡಿತ್ತು. ಆದರೆ ನಂತರದ ಓವರ್ ಗಳಲ್ಲಿ ಅಶ್ವಿನ್ ಬೌಲಿಂಗ್ ದಾಳಿಗೆ ತತ್ತರಿಸಿ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 
26-27 ನೇ ಓವರ್ ನಲ್ಲಿ ಇಂಗ್ಲೆಂಡ್ ತಂಡ 2 ವಿಕೆಟ್ ಕಳೆದುಕೊಂಡು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಬಂದ ಮೊಯೀನ್‌ ಅಲಿ ಇಂಗ್ಲೆಂಡ್ ನಾಯಕನಿಗೆ ಉತ್ತಮ ಸಾಥ್ ನೀಡಿದರೂ ಸಹ ಗುರಿ ತಲುಪುವುದಕ್ಕೆ ಸಹಕಾರಿಯಾಗಲಿಲ್ಲ. 3 ವಿಕೆಟ್ ಪಡೆದ ಅಶ್ವಿನ್ ಭಾರತದ ಪರ ಅತ್ಯುತ್ತಮ ಬೌಲರ್ ಎನಿಸಿದರು. 150 ರನ್ ಸಿಡಿಸಿದ್ದ ಯುವರಾಜ್ ಸಿಂಗ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಗಳಿಸಿದ್ದಾರೆ. 2ನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ಇಂಗ್ಲೆಂಡ್ ವಿರುದ್ಧ 2-0 ಅಂತರದಿಂದ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿದೆ. 
ಪ್ರಾರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಭಾರತ ತಂಡ ಜಸ್‌ಪ್ರೀತ್‌ ಬೂಮ್ರಾ, ಭುವನೇಶ್ವರ್ ಕುಮಾರ್ ಅವರ 45, 46-47 ನೇ ಓವರ್ ಗಳಲ್ಲಿ ಅತಿ ಹೆಚ್ಚು ರನ್ ಗಳನ್ನು ನೀಡಿದ್ದು ಗೆಲುವಿನ ಅಂತರ ಕಡಿಮೆಯಾಗಲು ಕಾರಣವಾಯಿತು. ಇನ್ನು ಜಡೇಜಾ ಮೊಯೀನ್ ಅವರ ಕ್ಯಾಚ್ ನ್ನು ಕೈಚೆಲ್ಲಿದ್ದೂ ಸಹ ಭಾರತ ತಂಡಕ್ಕೆ ದುಬಾರಿಯಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.