3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತಾ: ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದಾರೆ. ಕಳೆದೆರಡು ಪಂದ್ಯಗಳಲ್ಲಿ ಅಷ್ಟೇನೂ ಉತ್ತಮವಲ್ಲದ ಪ್ರದರ್ಶನ ನೀಡಿರುವ ಶಿಖರ್ ಧವನ್ ರ ಬದಲಿಗೆ ಅಜಿಂಕ್ಯಾ ರಹಾನೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅಂತೆಯೇ ಇಂಗ್ಲೆಂಡ್ ತಂಡದಲ್ಲಿಯೂ ಎರಡು ಬದಲಾವಣೆಗಳಾಗಿದ್ದು, ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿರುವ ಅಲೆಕ್ಸ್ ಹೇಲ್ಸ್ ಬದಲಿಗೆ ಬೇರ್ ಸ್ಟೋವ್ ಗೆ ಮತ್ತು ಜೋ ರೂಟ್ ಬದಲಿಗೆ ಬಿಲ್ಲಿಗ್ಸ್ ಗೆ ಸ್ಥಾನ ನೀಡಲಾಗಿದೆ.
3 ಪಂದ್ಯಗಳ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಲ್ಲಿ ಜಯಿಸಿದ್ದು, ಭಾರತದ ಪಾಲಿಗೆ ಅಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಆದರೆ ಇಂಗ್ಲೆಂಡ್ ಪಾಲಿಗೆ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಿಕೊಳ್ಳುವ ತವಕ. ಇನ್ನು ಭಾರತ ತಂಡದ ನೂತನ ನಾಯಕ ವಿರಾಟ್ ಕೊಹ್ಲಿಗೆ ಇದು ನಾಯಕನಾಗಿ ಮೊದಲ ಸರಣಿಯಾಗಿದ್ದು, ಈ ಪಂದ್ಯವನ್ನೂ ಗೆದ್ದು ಕ್ಲೀನ್ ಸ್ವೀಪ್ ಮಾಡುವ ಮೂಲಕ ನಾಯಕತ್ವದಲ್ಲಿ ಶುಭಾರಂಭ ಮಾಡುವ ಅಭಿಲಾಷೆ ಹೊಂದಿದ್ದಾರೆ.
ಭಾರತಕ್ಕೆ ಬ್ಯಾಟಿಂಗ್ ನಲ್ಲಿ ವಿರಾಟ್ ಕೊಹ್ಲಿ, ಧೋನಿ ಮತ್ತು ಕಳೆದ ಪಂದ್ಯದಲ್ಲಿ ಫಾರ್ಮ್ ಕಂಡುಕೊಂಡ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ಆಧಾರವಾಗಿದ್ದರೆ, ಬೌಲಿಂಗ್ ನಲ್ಲಿ ವಿಶ್ವದ ಅಗ್ರ ಸ್ಥಾನ ಹೊಂದಿರುವ ಸ್ಪಿನ್ನರ್ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಬೌಲಿಂಗ್ ನಲ್ಲಿ ಆಧಾರವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


