ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ, ಚಾಂಪಿಯನ್ಸ್ ಟ್ರೋಫಿಗೆ ಸಜ್ಜಾಗಲು ಉತ್ತಮ ವೇದಿಕೆ: ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮತ್ತು ಏಕದಿನ ಸರಣಿ ಗೆಲುವಿನ ಹರ್ಷದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮುಂದಿನ...

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ, ಚಾಂಪಿಯನ್ಸ್ ಟ್ರೋಫಿಗೆ ಸಜ್ಜಾಗಲು ಉತ್ತಮ ವೇದಿಕೆ: ಕೊಹ್ಲಿ
ವಿರಾಟ್ ಕೊಹ್ಲಿ
Published On :
ಕೋಲ್ಕತ್ತಾ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮತ್ತು ಏಕದಿನ ಸರಣಿ ಗೆಲುವಿನ ಹರ್ಷದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮುಂದಿನ ಟಿ20 ಸರಣಿ ಮುಂಬರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಸಜ್ಜಾಗಲು ಬೌಲರ್ ಗಳಿಗೆ ಉತ್ತಮ ವೇದಿಕೆ ಆಗಲಿದೆ ಎಂದರು. 
ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ವಿರೋಚಿತ ಸೋಲು ಕಂಡಿತ್ತು. ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ-ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಡೆತ್ ಓವರ್ ಗಳಲ್ಲಿ ಹೆಚ್ಚು ರನ್ ಬಿಟ್ಟುಕೊಡದೇ ನಿಯಂತ್ರಣ ಸಾಧಿಸಲು ಇದು ಅನುಕೂಲವಾಗಲಿದೆ ಎಂದರು. 
ಇನ್ನು ಟೀಂ ಇಂಡಿಯಾ ಆರಂಭಿಕ ವೈಪಲ್ಯ ಎದುರಿಸುತ್ತಿದೆ. ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್, ಶಿಖರ್ ಧವನ್, ರಹಾನೆಗೆ ಇನ್ನಷ್ಟು ಅವಕಾಶ ಕಲ್ಪಿಸಿಕೊಟ್ಟರೆ ಅವರು ಫಾರ್ಮ್ ಗೆ ಮರಳಲು ಸಾಧ್ಯವಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.