ಸ್ಕಾಟ್ಲೆಂಡ್ ಕ್ರಿಕೆಟ್ ಲೀಗ್‌ನಲ್ಲಿ ಆಡುವ ಶ್ರೀಶಾಂತ್ ಕನಸು ಭಗ್ನ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ವೇಗಿ ಎಸ್ ಶ್ರೀಶಾಂತ್ ಗೆ ನಿರಾಕ್ಷೇಪಣಾ ಪ್ರಮಾಣ ಪತ್ರ(ಎನ್ಒಸಿ) ನಿರಾಕರಿಸುವ ಮೂಲಕ ಮತ್ತೆ...

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ವೇಗಿ ಎಸ್ ಶ್ರೀಶಾಂತ್ ಗೆ ನಿರಾಕ್ಷೇಪಣಾ ಪ್ರಮಾಣ ಪತ್ರ(ಎನ್ಒಸಿ) ನಿರಾಕರಿಸುವ ಮೂಲಕ ಮತ್ತೆ ಕ್ರಿಕೆಟ್ ಆಡುವ ಕನಸು ಹೊತ್ತಿದ್ದ ಶ್ರೀಶಾಂತ್ ಗೆ ನಿರಾಸೆ ಮೂಡಿಸಿದೆ.
ಸ್ಕಾಟ್ಲೆಂಡ್ ಕ್ರಿಕೆಟ್ ಲೀಗ್ ನಲ್ಲಿ ಆಡುವ ಅವಕಾಶ ಶ್ರೀಶಾಂತ್ ಗೆ ಲಭಿಸಿತ್ತು. ಆಜೀವ ನಿಷೇಧವಿರುವ ಹಿನ್ನೆಲೆ ಶ್ರೀಶಾಂತ್ ಬಿಸಿಸಿಐಗೆ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡುವಂತೆ ಮನವಿ ಮಾಡಿದ್ದರು.
2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಆರೋಪ ಸಾಬೀತಾದ ಕಾರಣ ಬಿಸಿಸಿಐ ಆಜೀವ ನಿಷೇಧ ಹೇರಿತ್ತು. ಈ ನಿಷೇಧವನ್ನು ತೆರವುಗೊಳಿಸುವ ಯಾವುದೇ ಅಭಿಪ್ರಾಯ ಇಲ್ಲ. ಅಲ್ಲದೆ ಮಂಡಳಿಯ ಯಾವುದೇ ಕ್ರಿಕೆಟ್ ಸೌಲಭ್ಯಗಳನ್ನು ಬಳಸಿಕೊಳ್ಳಲು ಶ್ರೀಶಾಂತ್ ಗೆ ಅನುಮತಿಯನ್ನು ಬಿಸಿಸಿಐ ನಿರಾಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


