ಕ್ರಿಕೆಟಿಗ ರಾಹುಲ್ ದ್ರಾವಿಡ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್
ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರನ್ನು ಬೆಂಗಳೂರು ವಿವಿಯ ಪ್ರಸಕ್ತ ಸಾಲಿನ ಗೌರವ ಡಾಕ್ಟರೇಟ್‌ಗೆ ಪದವಿಗೆ ಆಯ್ಕೆ ...

ಬೆಂಗಳೂರು: ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರನ್ನು ಬೆಂಗಳೂರು ವಿವಿಯ ಪ್ರಸಕ್ತ ಸಾಲಿನ ಗೌರವ ಡಾಕ್ಟರೇಟ್‌ಗೆ ಪದವಿಗೆ ಆಯ್ಕೆ ಮಾಡಲಾಗಿದೆ.
ಜ.27ರಂದು ನಡೆಯುವ ವಿವಿಯ 52ನೇ ಘಟಿಕೋತ್ಸವದಲ್ಲಿ ದ್ರಾವಿಡ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ದ್ರಾವಿಡ್ ಗೌರವ ಡಾಕ್ಟರೇಟ್ ಗೆ ರಾಜ್ಯಪಾಲರು ಮಂಗಳವಾರ ಅನುಮೋದನೆ ನೀಡಿದ್ದಾರೆ ಎಂದು ವಿವಿ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಹೇಳಿದ್ದಾರೆ.
ಪ್ರತಿ ವರ್ಷ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತಿತ್ತು. ಕಳೆದ ವರ್ಷ ರಾಜ್ಯಪಾಲರು ಯಾರ ಹೆಸರನ್ನೂ ಅನುಮೋದಿಸದ ಕಾರಣ ಗೌರವ ಡಾಕ್ಟರೇಟ್ ನೀಡಲಿರಲಿಲ್ಲ. ಈ ವರ್ಷ ಮೂವರ ಹೆಸರನ್ನು ಕಳುಹಿಸಲಾಗಿತ್ತು, ಅದರಲ್ಲಿ ರಾಹುಲ್ ದ್ರಾವಿಡ್ ಹೆಸರನ್ನು ಮಾತ್ರ ರಾಜ್ಯಪಾಲರು ಅನುಮೋದಿಸಿದ್ದಾರೆಂದು ಕುಲಪತಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


