ಕಾನ್ಪುರ ಸೋಲಿನ ಬಳಿಕ ತಿರುಗೇಟು ನೀಡಲು ಟೀಂ ಇಂಡಿಯಾ ಸಜ್ಜು!
ಕಾನ್ಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾ ಮತ್ತೆ ಗೆಲುವಿನ ಟ್ರ್ಯಾಕ್ ಗೆ ಮರಳು ಸಿದ್ಧತೆ ನಡೆಸಿದ್ದು, ಭಾನುವಾರ ನಾಗ್ಪುರದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ತಿರುಗೇಟು ನೀಡಲು ಸಜ್ಜಾಗಿದೆ.

ನಾಗ್ಪುರ: ಕಾನ್ಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾ ಮತ್ತೆ ಗೆಲುವಿನ ಟ್ರ್ಯಾಕ್ ಗೆ ಮರಳು ಸಿದ್ಧತೆ ನಡೆಸಿದ್ದು, ಭಾನುವಾರ ನಾಗ್ಪುರದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ತಿರುಗೇಟು ನೀಡಲು ಸಜ್ಜಾಗಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಬದಲಾವಣೆಗೆ ಮುಂದಾದರೆ ಅಚ್ಚರಿ ಏನಿಲ್ಲ ಎನ್ನಬಹುದು. ತಂಡದ ಬೆಂಚ್ ಸ್ಟ್ರೆಂತ್ ಕೂಡ ಪ್ರಬಲವಾಗಿದ್ದು, ಹೆಚ್ಚುವರಿ ಆಟಗಾರರು ಕೂಡ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಕಾದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ನಾಯಕ ಕೊಹ್ಲಿ ಬದಲಾವಣೆ ಬಯಸಬಹುದು ಎಂದು ಹೇಳಲಾಗುತ್ತಿದೆ. ಇನ್ನು ಸರಣಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭಾರತಕ್ಕೆ ಈ ಪಂದ್ಯ ಮಹತ್ವದ್ದಾಗಿದ್ದು, ಮೊದಲ ಪಂದ್ಯದ ತಪ್ಪುಗಳನ್ನು ತಿದ್ದಿಕೊಂಡು ಸಾಮರ್ಥ್ಯಕ್ಕೆ ತಕ್ಕ ಆಟವಾಡುವ ಅನಿವಾರ್ಯತೆ ಎದುರಾಗಿದೆ.
ಇನ್ನು ವಿಶ್ವದಲ್ಲೇ ಅತ್ಯಂತ ಪ್ರಬಲ ಬ್ಯಾಟಿಂಗ್ ಲೈನ್ ಅಪ್ ಹೊಂದಿರುವ ಟೀಂ ಇಂಡಿಯಾ ಇದೇ ಬ್ಯಾಟಿಂಗ್ ವೈಫಲ್ಯದಿಂದಾಗಿ ಕಳೆದ ಪಂದ್ಯವನ್ನು ಕೈ ಚೆಲ್ಲಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಬ್ಯಾಟ್ಸಮನ್ ಗಳು ತಮ್ಮ ಜವಾಬ್ದಾರಿಯನ್ನು ಅರಿತು ಬ್ಯಾಟಿಂಗ್ ಮಾಡಿದರೆ ಈ ಪಂದ್ಯ ಭಾರತದ ಕೈವಶವಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್, ನಾಯಕತ್ವಕ್ಕೆ ವಿದಾಯ ಹೇಳಿ ಬ್ಯಾಟಿಂಗ್ ಮೇಲೆ ಗಮನ ಹರಿಸಿರುವ ಧೋನಿ, ಹಾಗೂ ನಾಯಕ ವಿರಾಟ್ ಕೊಹ್ಲಿ ತಮ್ಮ ಜವಾಬ್ದಾರಿ ಅರಿತು ಬ್ಯಾಟ್ ಬೀಸುವ ಅವಶ್ಯಕತೆ ಇದೆ.
ಇನ್ನು ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದ ಆಶೀಶ್ ನೆಹ್ರಾ ಅವರಿಗೆ ಈ ಪಂದ್ಯದಿಂದ ಖೋಕ್ ನೀಡುವ ಸಾಧ್ಯತೆ ಇದ್ದು, ಅವರ ಬದಲಿಗೆ ಭುವಿಗೆ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೌಲಿಂಗ್ ಮತ್ತು ಬ್ಯಾಟಿಂಗ್ ಗೆ ಸಹಕರಿಸುವ ಪಿಚ್
ಕಾನ್ಪುರ ಪಿಚ್ ಫ್ಲ್ಯಾಟ್ ಪಿಚ್ ಆಗಿದ್ದು, ಇಲ್ಲಿ ಬೌಲರ್ ಗಳು ಮತ್ತು ಬ್ಯಾಟ್ಸಮನ್ ಗಳಿಗೆ ಸಮಾನ ಅವಕಾಶವಿದೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಬೌಲರ್ ಗಳು ಅಥವಾ ಬ್ಯಾಟ್ಸಮನ್ ಗಳು ಮೈಲುಗೈ ಸಾಧಿಸಬಹುದು. ತಜ್ಞರ ಪ್ರಕಾರ ಮೊದಲು ಬ್ಯಾಟಿಂಗ್ ಮಾಡುವ ತಂಡ ಇಲ್ಲಿ ಹೆಚ್ಚು ರನ್ ಗಳಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


