ಟಿ20 ಹೈವೋಲ್ಟೇಜ್ ಪಂದ್ಯ: ಇಂಗ್ಲೆಂಡ್‌ಗೆ ಗೆಲ್ಲಲು 203 ರನ್‍ಗಳ ಬೃಹತ್ ಸವಾಲು
ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ ಟಿ20 ಸರಣಿ ಅಂತಿಮ ಹಾಗೂ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ...

Published On :
ಬೆಂಗಳೂರು: ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ ಟಿ20 ಸರಣಿ ಅಂತಿಮ ಹಾಗೂ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 202 ರನ್‍ಗಳ ಬೃಹತ್ ಮೊತ್ತ ಕಲೆಹಾಕಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ್ದು ಸುರೇಶ್ ರೈನಾ, ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅಬ್ಬರ ಬ್ಯಾಟಿಂಗ್ ನಿಂದಾಗಿ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದೆ. ಇದರೊಂದಿಗೆ ಇಂಗ್ಲೆಂಡ್ ಗೆ ಗೆಲ್ಲಲು 203 ರನ್ ಗಳ ಬೃಹತ್ ಮೊತ್ತದ ಸವಾಲು ನೀಡಿದೆ.
ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿ ಕೇವಲ 2 ರನ್ ಗೆ ಔಟಾಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ನಂತರ ಕೆಎಲ್ ರಾಹುಲ್ ಗೆ ಜತೆಯಾದ ಸುರೇಶ್ ರೈನಾ ಜೋಡಿ ಆರ್ಭಟಿಸಿದರು. 6.1 ಓವರ್ ನಲ್ಲಿ ಈ ಜೋಡಿ ಬರೋಬ್ಬರಿ 61 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. 22 ರನ್ ಗಳಿಸಿದ್ದ ಕೆಎಲ್ ರಾಹುಲ್ ಬೆನ್ ಸ್ಟೋಕ್ಸ್ ಎಸೆತದಲ್ಲಿ ಬೌಲ್ಡ್ ಔಟ್ ಆಗಿ ನಿರ್ಗಮಿಸಿದರು. ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ 45 ಎಸೆತಗಳಲ್ಲಿ ಭರ್ಜರಿ 5 ಸಿಕ್ಸರ್, 2 ಬೌಂಡರಿಯೊಂದಿಗೆ 63 ರನ್ ಗಳಿಸಿ ಔಟಾದರು. ನಂತರ ಬಂದ ಯುವರಾಜ್ ಸಿಂಗ್ ಕೇವಲ 9 ಎಸೆತಗಳಲ್ಲಿ 3 ಸಿಕ್ಸರ್ 1 ಬೌಂಡರಿ ಸೇರಿದಂತೆ 27 ರನ್ ಸಿಡಿಸಿ ಔಟಾದರು.
ಇನ್ನು ಮಾಜಿ ನಾಯಕ ಎಂಎಸ್ ಧೋನಿ ಇದೇ ಮೊದಲ ಬಾರಿಗೆ ಟಿ20 ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಸಂಭ್ರಮಿಸಿದರು. 36 ಎಸೆತಗಳಲ್ಲಿ 2 ಸಿಕ್ಸರ್, 5 ಬೌಂಡರಿಯೊಂದಿಗೆ 56 ರನ್ ಗಳಿಸಿ ಔಟಾದರು, ನಂತರ ಬಂದ ಹಾರ್ದಿಕ್ ಪಾಂಡ್ಯಾ 11 ರನ್ ಗಳಿಸಿ ಔಟಾದರೇ, ರಿಷಬ್ ಪಂತ್ 6 ರನ್ ಗಳಿಸಿ ಅಜೇಯರಾದರು.
ಇಂಗ್ಲೆಂಡ್ ಪರ ತೈಮೂರ್ ಮಿಲ್ಸ್, ಕ್ರಿಸ್ ಜೋರ್ಡಾನ್, ಬೆನ್ ಸ್ಟೋಕ್ಸ್ ಮತ್ತು ಪ್ಲುನ್ಕೇಟ್ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


