ಐಸಿಸಿ ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ 6ನೇ ಅಲ್ಪಮೊತ್ತಕ್ಕೆ ವಿಂಡೀಸ್ ಸರ್ವಪತನ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ವೆಸ್ಟ್ ಇಂಡೀಸ್ ತಂಡ 6ನೇ ಅಲ್ಪಮೊತ್ತಕ್ಕೆ ಸರ್ವಪತನ ಕಂಡಿದೆ...

Published On :
ಲೀಸೆಸ್ಟರ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ವೆಸ್ಟ್ ಇಂಡೀಸ್ ತಂಡ 6ನೇ ಅಲ್ಪಮೊತ್ತಕ್ಕೆ ಸರ್ವಪತನ ಕಂಡಿದೆ.
ಗ್ರೇಸ್ ರೋಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ತಂಡವನ್ನು 48 ರನ್ ಗಳಿಗೆ ಆಲೌಟ್ ಮಾಡಿತ್ತು. ನಂತರ ಅಲ್ಪಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ವನಿತೆಯರು ವಿಕೆಟ್ ನಷ್ಟವಿಲ್ಲದೆ 6.2 ಓವರ್ ನಲ್ಲಿ 51 ರನ್ ಸಿಡಿಸಿ ಭರ್ಜರಿ ಜಯ ಗಳಿಸಿತು.
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಇನ್ನಿಂಗ್ಸ್ ಒಂದರಲ್ಲಿ ಅಲ್ಪಮೊತ್ತ ಗಳಿಸಿದ ತಂಡ ಪಾಕಿಸ್ತಾನ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 27 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ 29 ರನ್ ಗಳಿಗೆ ಸರ್ವಪತನ ಕಾಣುವ ಮೂಲಕ ನೆದರ್ಲ್ಯಾಂಡ್ ತಂಡ ಎರಡನೇ ಸ್ಥಾನದಲ್ಲಿದೆ. ಇನ್ನು ಭಾರತ ಸಹ 37 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೂರನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


