ಐಸಿಸಿ ಮಹಿಳಾ ಏಕದಿನ ವಿಶ್ವಕಪ್: ಟೀಂ ಇಂಡಿಯಾಗೆ ಸತತ 4ನೇ ಜಯ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವು ಸಾಧಿಸಿದೆ...

Published On :
ಡರ್ಬಿ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವು ಸಾಧಿಸಿದೆ.
ಡರ್ಬಿಯ ಕೌಂಟಿ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು 16 ರನ್ ಗಳಿಂದ ಮಣಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 232 ರನ್ ಪೇರಿಸಿತು. 233 ರನ್ ಗಳ ಗುರಿ ಬೆನ್ನಟ್ಟಿದ ಲಂಕಾ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಗಳನಷ್ಟೇ ಗಳಿಸಲು ಶಕ್ತವಾಯಿತು.
ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ 78 ಮತ್ತು ತಂಡದ ನಾಯಕಿ ಮಿಥಾಲಿ ರಾಜ್ 53 ರನ್ ಗಳ ಜತೆಯಾಟ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಲು ಸಾಧ್ಯವಾಯಿತು. ಇಳಿದಂತೆ ಪೂನಂ ರಾವುತ್ 16, ಕೌರ್ 20, ಕೃಷ್ಣಮೂರ್ತಿ 29 ರನ್ ಗಳಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ವೀರಕ್ಕೊಡಿ 3, ರಣವೀರ 2 ವಿಕೆಟ್ ಪಡೆದಿದ್ದಾರೆ.
ಶ್ರೀಲಂಕಾ ಪರ ಹನ್ಸಿಕಾ 29, ಜಯಾಂಗನಿ 25, ಸಿರಿವರ್ಧನೆ 37, ಸುರಂಗಿಕಾ 61 ಮತ್ತು ಪ್ರಸಾದನಿ 21 ರನ್ ಗಳಿಸಿದ್ದಾರೆ. ಭಾರತ ಪರ ಜೂಲನ್ ಗೋಸ್ವಾಮಿ ಮತ್ತು ಪೂನಂ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


