ವಿಂಡೀಸ್ ವಿರುದ್ಧ ಸರಣಿ ಗೆದ್ದರೂ ಎರಡು ಅಂಕ ಕಳೆದುಕೊಂಡು ಟೀಂ ಇಂಡಿಯಾ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಗೆದ್ದರೂ ಟೀಂ ಇಂಡಿಯಾ ಎರಡು ಅಂಕಗಳನ್ನು ಕಳೆದುಕೊಂಡು ಐಸಿಸಿ ಏಕದಿನ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ...

Published On :
ದುಬೈ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಗೆದ್ದರೂ ಟೀಂ ಇಂಡಿಯಾ ಎರಡು ಅಂಕಗಳನ್ನು ಕಳೆದುಕೊಂಡು ಐಸಿಸಿ ಏಕದಿನ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ.
ಐಸಿಸಿ ನೂತನ ಏಕದಿನ ಅಂಕಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಟೀಂ ಇಂಡಿಯಾ 114 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನು 119 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ 117 ಅಂಕಗಳೊಂದಿಗೆ ಆಸ್ಟ್ರೇಲಿಯಾ ಮೊದಲೆರಡು ಸ್ಥಾನಗಳಲ್ಲಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತ 3-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿತ್ತು. ಆದರೆ ನಾಲ್ಕನೇ ಏಕದಿನ ಪಂದ್ಯ ಸೋತಿದ್ದರಿಂದ ಭಾರತ ಎರಡು ಅಂಕಗಳನ್ನು ಕಳೆದುಕೊಂಡಿದೆ. ಹಳೆಯ ಏಕದಿನ ಅಂಕಪಟ್ಟಿಯಲ್ಲಿ 116 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


