ರವಿಶಾಸ್ತ್ರಿ ಟೀಂ ಇಂಡಿಯಾ ಹೊಸ ಕೋಚ್: ಬಿಸಿಸಿಐ ಅಧಿಕೃತ ಘೋಷಣೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ಮಾಜಿ ನಿರ್ದೇಶಕ ಹಾಗೂ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನು ತಂಡದ ನೂತನ ಪ್ರಧಾನ...

Published On :
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ಮಾಜಿ ನಿರ್ದೇಶಕ ಹಾಗೂ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನು ತಂಡದ ನೂತನ ಪ್ರಧಾನ ಕೋಚ್ ಆಗಿ ಆಯ್ಕೆ ಮಾಡಿದೆ. ಇನ್ನು ಮುಂದಿನ ಸರಣಿಗಳಲ್ಲಿ ಬೌಲಿಂಗ್ ವಿಭಾಗದಲ್ಲಿ ಜಹೀರ್ ಖಾನ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ರಾಹುಲ್ ದ್ರಾವಿಡ್ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಸಂದರ್ಶನ ನಡೆಸಿದ್ದು ಸಂದರ್ಶನದಲ್ಲಿ ಪಾಲ್ಗೊಂಡಿದ್ದ ರವಿಶಾಸ್ತ್ರಿ ಅವರನ್ನು ಅಧಿಕೃತವಾಗಿ ಟೀಂ ಇಂಡಿಯಾ ಪ್ರಧಾನ ಕೋಚ್ ಆಗಿ ಆಯ್ಕೆ ಮಾಡಲಾಗಿದ್ದು ಕಳೆದ ರಾತ್ರಿ ಬಿಸಿಸಿಐ ರವಿಶಾಸ್ತ್ರಿ ತಂಡದ ಕೋಚ್ ಎಂದು ಘೋಷಿಸಿದೆ.
ಟೀಂ ಇಂಡಿಯಾದ ಕೋಚ್ ಹುದ್ದೆಗಾಗಿ ರವಿಶಾಸ್ತ್ರಿ ಹಾಗೂ ಮಾಜಿ ಕ್ರಿಕೆಟಿಗೆ ವಿರೇಂದ್ರ ಸೆಹ್ವಾಗ್ ನಡುವೆ ತೀವ್ರ ಪೈಪೋಟಿ ಎದುರಾಗಿತ್ತಾದರೂ ಅಂತಿಮವಾಗಿ ರವಿಶಾಸ್ತ್ರಿ ಅವರನ್ನು ನೂತನ ಪ್ರಧಾನ ಕೋಚ್ ಆಗಿ ಆಯ್ಕೆ ಮಾಡಲಾಗಿದೆ. ಮೂಲಗಳ ಪ್ರಕಾರ 2019ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯವರೆಗೂ ರವಿಶಾಸ್ತ್ರಿ ಅವರನ್ನು ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ವಾಖೆಂಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಕೋಚ್ ಆಕಾಂಕ್ಷಿಗಳ ಸಂದರ್ಶನ ನಡೆಯಿತು. ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ ನೇತೃತ್ವದಲ್ಲಿ ಕೋಚ್ ಆಕಾಂಕ್ಷಿಗಳ ಸಂದರ್ಶನ ನಡೆಯಿತು. ರವಿಶಾಸ್ತ್ರಿ, ಸೆಹ್ವಾಗ್, ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್ ಟಾಮ್ ಮೂಡಿ, ಹಾಲಿ ಆಫ್ಘಾನಿಸ್ತಾನ ತಂಡದ ಕೋಚ್ ಲಾಲ್ ಚಂದ್ ರಜಪೂತ್, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ಕೋಚ್ ಮತ್ತು ನಿರ್ದೇಶಕರಾದ ರಿಚರ್ಡ್ ಫೈಬಸ್ ಸೇರಿ ಒಟ್ಟು 6 ಮಂದಿ ಕೋಚ್ ಆಕಾಂಕ್ಷಿಗಳು ಸಂದರ್ಶನದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BCCIಬಿಸಿಸಿಐZaheer KhanRavi shastriರವಿಶಾಸ್ತ್ರಿRahul Dravidರಾಹುಲ್ ದ್ರಾವಿಡ್ಜಹೀರ್ ಖಾನ್India coachಭಾರತದ ಕೋಚ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


