ಕ್ರಿಕೆಟಿಗ ಉಮೇಶ್ ಯಾದವ್ ಮನೆ ಮೇಲೆ ಕಳ್ಳರ ದಾಳಿ, ಹಣ, ದುಬಾರಿ ಮೊಬೈಲ್ ಗಳ ಕಳವು
ಖ್ಯಾತ ಕ್ರಿಕೆಟಿಗ ಉಮೇಶ್ ಯಾದವ್ ಅವರ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದು, ಮನೆಯಲ್ಲಿ ನಗದು ಮತ್ತು 2 ದುಬಾರಿ ಮೊಬೈಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಾಗ್ಪುರ: ಖ್ಯಾತ ಕ್ರಿಕೆಟಿಗ ಉಮೇಶ್ ಯಾದವ್ ಅವರ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದು, ಮನೆಯಲ್ಲಿ ನಗದು ಮತ್ತು 2 ದುಬಾರಿ ಮೊಬೈಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಉಮೇಶ್ ಯಾದವ್ ಅವರ ನಾಗ್ಪುರದಲ್ಲಿರುವ ಮನೆಗೆ ನುಗ್ಗಿದ್ದ ಕಳ್ಳರು 45 ಸಾವಿರ ರು. ನಗದು ಮತ್ತು 2 ಮೊಬೈಲ್ ಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಸೋಮವಾರ ರಾತ್ರಿ ಸುಮಾರ 7ರಿಂದ 9ರ ನಡುವೆ ಉಮೇಶ್ ಕುಟುಂಬ ಮನೆಯಲ್ಲಿಲ್ಲದ ವೇಳೆ ಕಳ್ಳತನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್ಪುರದ ಲಕ್ಷ್ಮೀನಗರ ಪ್ರದೇಶದಲ್ಲಿನ ಕಟ್ಟಡದ 9ನೇ ಮಹಡಿಯಲ್ಲಿ ಉಮೇಶ್ ಯಾದವ್ ಅವರ ಫ್ಲ್ಯಾಟ್ ನ ಕಿಟಕಿಯೊಂದನ್ನು ಮುರಿದು ಕಳ್ಳರು ಮನೆಯೊಳಗೆ ಪ್ರವೇಶಿಸಿದ್ದು, ಕಟ್ಟಡದ 8ನೇ ಮಹಡಿಯಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ವಿುಕರ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪೈಕಿ ಓರ್ವ ಶಂಕಿತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


