ಕ್ರಿಕೆಟ್

ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುತ್ತೇವೆ: ಕೊಹ್ಲಿ, ರವಿಶಾಸ್ತ್ರಿ

ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಲಂಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು...

ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುತ್ತೇವೆ: ಕೊಹ್ಲಿ, ರವಿಶಾಸ್ತ್ರಿ
ರವಿಶಾಸ್ತ್ರಿ-ವಿರಾಟ್ ಕೊಹ್ಲಿ
Published On :
ಕೊಲಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಲಂಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳಲಾಗುವುದು ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. 
ದಿನೇಶ್ ಚಂಡಿಮಾಲ್ ನೇತೃತ್ವದ ಲಂಕಾ ತಂಡವನ್ನು ಸುಲಭವಾಗಿ ಪರಿಗಣಿಸುವುದಿಲ್ಲ. ತವರಿನಲ್ಲಿ ಶ್ರೀಲಂಕಾ ಉತ್ತಮ ಟ್ರಾಕ್ ರೆಕಾರ್ಡ್ ಅನ್ನು ಹೊಂದಿದೆ. ಹೀಗಾಗಿ ನಮ್ಮ ತಂಡ ಕಠಿಣ ಸ್ಪರ್ಧೆ ನೀಡಲಿದೆ ಎಂದು ತಂಡದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. 
ಇದೇ ವೇಳೆ ಮಾತನಾಡಿದ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಸದೃಢ ತಂಡವಾಗಿದೆ. ಒತ್ತಡದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ ಉತ್ತಮ ಪ್ರದರ್ಶನ ನೀಡುತ್ತೇವೆ. ಈ ಹಿಂದೆ ಮಾಡಿದ ಕೆಲ ತಪ್ಪುಗಳನ್ನು ಮುಂದಿನ ಪಂದ್ಯಗಳಲ್ಲಿ ಮುಂದುವರೆಸುವುದಿಲ್ಲ. ಇನ್ನು ತಂಡದಲ್ಲಿ ಮುರಳಿ ವಿಜಯ್ ಗಾಯದ ಸಮಸ್ಯೆಯಿಂದ ತಂಡದಿಂದ ದೂರ ಉಳಿದಿದ್ದಾರೆ ಅವರ ಸ್ಥಾನದಲ್ಲಿ ಶಿಖರ್ ಧವನ್ ಆಡಲಿದ್ದು ಆರಂಭಿಕರು ಉತ್ತಮ ಪ್ರದರ್ಶನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದರು. 
ಜುಲೈ 27ರಿಂದ ಶ್ರೀಲಂಕ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸದ್ಯ ಶ್ರೀಲಂಕಾ ತಲುಪಿರುವ ತಂಡ ಅಭ್ಯಾಸದಲ್ಲಿ ತೊಡಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.