ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಜ್ವರ, ಲಂಕಾ ವಿರುದ್ಧದ ಮೊದಲ ಟೆಸ್ಟ್ ಗೆ ಅಲಭ್ಯ: ಬಿಸಿಸಿಐ
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಪ್ರಮುಖ ಆಟಗಾರ ಕೆಎಲ್ ರಾಹುಲ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಮೊದಲ ಟೆಸ್ಟ್ ಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಕೊಲಂಬೋ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಪ್ರಮುಖ ಆಟಗಾರ ಕೆಎಲ್ ರಾಹುಲ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಮೊದಲ ಟೆಸ್ಟ್ ಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಬಿಸಿಸಿಐ ಸ್ಪಷ್ಟನೆ ನೀಡಿದ್ದು, ಪ್ರಸ್ತುತ ಶ್ರೀಲಂಕಾ ಸರಣಿ ನಿಮಿತ್ತ ಕೊಲಂಬೊದಲ್ಲಿ ಭಾರತ ತಂಡದೊಂದಿಗಿರುವ ಕೆಎಲ್ ರಾಹುಲ್ ವೈರಾಣು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಟಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ. ಹೀಗಾಗಿ ಅವರು ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಹೀಗಾಗಿ ಗಾಲೆಯಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ರಾಹುಲ್ ಗೈರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ಶ್ರೀಲಂಕಾ ಅಧ್ಯಕ್ಷರ ಇಲೆವೆನ್ ತಂಡದ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ರಾಹುಲ್ ಅರ್ಧಶತಕ ಸಿಡಿಸಿ ತಂಡದ ಬ್ಯಾಟಿಂಗ್ ಗೆ ಬಲ ತುಂಬಿದ್ದರು. ಆದರೆ ಇದೀಗ ಅನಾರೋಗ್ಯಕ್ಕೆ ತುತ್ತಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇನ್ನು ರಾಹುಲ್ ಗೆ ಬದಲಿ ಆಟಗಾರರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೂ ಕೂಡ ಕುತೂಹಲ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


