ಕ್ರಿಕೆಟ್

ಶ್ರೀಲಂಕಾ ಟೆಸ್ಟ್: ದ್ವಿಶತಕದ ಅಂಚಿನಲ್ಲಿ ಎಡವಿದ ಶಿಖರ್ ಧವನ್

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಭರ್ಜರಿ ಶತಕ ಸಿಡಿಸಿದ್ದಾರೆ...

ಶ್ರೀಲಂಕಾ ಟೆಸ್ಟ್: ದ್ವಿಶತಕದ ಅಂಚಿನಲ್ಲಿ ಎಡವಿದ ಶಿಖರ್ ಧವನ್
ಶಿಖರ್ ಧವನ್
Published On :
ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಭರ್ಜರಿ ಶತಕ ಸಿಡಿಸಿದ್ದಾರೆ. 
ಗಾಲೆಯಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಪ್ರಥಮ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಗೆ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಅಭಿನವ್ ಮುಕುಂದ್ ಜತೆ ಆರಂಭಿಕರಾಗಿ ಕಣಕ್ಕಿಳಿದ ಶಿಖರ್ ಧವನ್ 168 ಎಸೆತಗಳಲ್ಲಿ 190 ರನ್ ಗಳನ್ನು ಸಿಡಿಸಿದ್ದು ದ್ವಿಶತಕದ ಅಂಚಿನಲ್ಲಿ ಎಡವಿದರು. 
ಇನ್ನು ಅಭಿವನ್ ಮುಕುಂದ್ 12 ರನ್ ಗಳಿಗೆ ಔಟಾದರೆ, ತಂಡದ ನಾಯಕ ವಿರಾಟ್ ಕೊಹ್ಲಿ 3 ರನ್ ಸಿಡಿಸಿ ಔಟಾದರು. ಪ್ರಸ್ತುತ ಚೇತೇಶ್ವರ ಪೂಜಾರ 150 ಎಸೆತಗಳಲ್ಲಿ ಅಜೇಯ 85 ರನ್ ಮತ್ತು ಅಜಿಂಕ್ಯ ರಹಾನೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಭಾರತ 60 ಓವರ್ ಗಳ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 295 ರನ್ ಗಳಿಸಿದೆ. ಶ್ರೀಲಂಕಾ ಪರ ಪ್ರದೀಪ್ 3 ವಿಕೆಟ್ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.