ಗಾಲೆ ಟೆಸ್ಟ್: ಶ್ರೀಲಂಕಾ ವಿರುದ್ಧ ಬೃಹತ್ ಮೊತ್ತ ಪೇರಿಸಿದ ಭಾರತ 600ಕ್ಕೆ ಆಲೌಟ್!
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟ ಮುಂದುವರೆದಿದ್ದು, 600 ರನ್ ಗಳ ಬೃಹತ್ ಮೊತ್ತ ಪೇರಿಸಿದ ಭಾರತ ತಂಡ ಆಲೌಟ್ ಆಗಿದೆ.

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟ ಮುಂದುವರೆದಿದ್ದು, 600 ರನ್ ಗಳ ಬೃಹತ್ ಮೊತ್ತ ಪೇರಿಸಿದ ಭಾರತ ತಂಡ ಆಲೌಟ್ ಆಗಿದೆ.
ಮೊದಲ ದಿನದಾಟದ ಅಂತ್ಯಕ್ಕೆ ಭಾರತ 3 ವಿಕೆಟ್ ನಷ್ಟಕ್ಕೆ 399 ರನ್ ಗಳಿಸಿ 2ನೇ ದಿನದಾಟಕ್ಕೆ ಆಟ ಕಾಯ್ದುಕೊಂಡಿತ್ತು. ನಿನ್ನೆ 144 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಪೂಜಾರಾ ಇಂದು ಕೇವಲ 7 ರನ್ ಗಳಿಸಿ ಎನ್ ಪ್ರದೀಪ್ ಗೆ ವಿಕೆಟ್ ಒಪ್ಪಿಸಿದರು. ಪೂಜಾರ ಬಳಿಕ ರಹಾನೆ ಕೂಡ ಅರ್ಧಶತಕ ಗಳಿಸಿ ಲಾಹಿರು ಕುಮಾರಗೆ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್ ಗೆ ಬಂದ ಆರ್ ಆಶ್ವಿನ್ 60 ಎಸೆತಗಳಲ್ಲಿ 47 ರನ್ ಗಳಿಸಿದರು. ವೃದ್ಧಿಮಾನ್ ಸಹಾ 17 ರನ್ ಗೆ ವಿಕೆಟ್ ಒಪ್ಪಿಸಿದರೆ, ಅರ್ಧಶತಕದ ಅಶ್ವಿನ್ ಕೂಡ ಅರ್ಧಶತಕ ಹೊಸ್ತಿಲಲ್ಲಿ ಯಡವಿ ಎನ್ ಪ್ರದೀಪ್ ಗೆ ವಿಕೆಟ್ ಒಪ್ಪಿಸಿದರು.
ಬಳಿಕ ಕ್ರೀಸ್ ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯಾ ಕ್ರೀಸ್ ನಲ್ಲಿದ್ದ ಸ್ವಲ್ಪ ಹೊತ್ತು ಲಂಕಾ ಬೌಲರ್ ಗಳ ಬೆವರಿಳಿಸಿದರು. ಪದಾರ್ಪಣೆ ಪಂದ್ಯದಲ್ಲೇ ಪಾಂಡ್ಯಾ ಅರ್ಥಶತಕ ಸಿಡಿಸಿದ್ದು ವಿಶೇಷವಾಗಿತ್ತು. ಕೇವಲ 49 ಎಸೆತಗಳನ್ನು ಎದುರಿಸಿದ ಪಾಂಡ್ಯಾ 5 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಗಳ ನೆರವಿನಿಂದ ಅರ್ಧಶತಕ ಪೂರೈಸಿದರು. ಬಳಿಕ ಲಾಹಿರು ಕುಮಾರಗೆ ವಿಕೆಟ್ ಒಪ್ಪಿಸಿದರು. ಬಳಿಕ ಜಡೇಜಾ (15 ರನ್), ಶಮಿ (30 ರನ್) ಹಾಗೂ ಉಮೇಶ್ ಯಾದವ್ (11 ರನ್) ವೇಗವಾಗಿ ರನ್ ಗಳಿಸಲು ಹೋಗಿ ವಿಕೆಟ್ ಕೈ ಚೆಲ್ಲಿದರು.
ಅಂತಿಮವಾಗಿ ಭಾರತ ತಂಡ 600 ರನ್ ಗಳಿಗೆ ಆಲ್ ಔಟ್ ಆಯಿತು. ಶ್ರೀಲಂಕಾ ಪರ ಮೊದಲ ಇನ್ನಿಂಗ್ಸ್ ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಎನ್ ಪ್ರದೀಪ್ 6 ವಿಕೆಟ್ ಕಬಳಿಸಿ ಯಶಸ್ವೀ ಬೌಲರ್ ಎನಿಸಿದರೆ, ಲಾಹಿರು ಕುಮಾರ 3 ವಿಕೆಟ್ ಪಡೆದು ಉತ್ತಮ ಸಾಥ್ ನೀಡಿದರು. ಅಂತೆಯೇ ಅನುಭವಿ ರಂಗನಾ ಹೆರಾತ್ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


