ಮಾಜಿ ನಾಯಕ ಮಹಮದ್ ಅಜರುದ್ದೀನ್ ದಾಖಲೆ ಮುರಿದ ವಿರಾಟ್ ಕೊಹ್ಲಿ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆ ಹಿಂದಿಕ್ಕುವ ಸರಣಿ ಮುಂದುವರೆದಿದ್ದು, ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿರುವ ಕೊಹ್ಲಿ ಇದೀಗ ಮಾಜಿ ನಾಯಕ ಮಹಮದ್ ಅಜರುದ್ದೀನ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಗಾಲೆ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆ ಹಿಂದಿಕ್ಕುವ ಸರಣಿ ಮುಂದುವರೆದಿದ್ದು, ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿರುವ ಕೊಹ್ಲಿ ಇದೀಗ ಮಾಜಿ ನಾಯಕ ಮಹಮದ್ ಅಜರುದ್ದೀನ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಕೊಹ್ಲಿ ಆಕರ್ಷಕ ಶತಕ ಗಳಿಸಿದ್ದು, ಇದು ಅವರ ವೃತ್ತಿ ಜೀವನದ 17 ಟೆಸ್ಟ್ ಶತಕವಾಗಿದೆ. ಅಂತೆಯೇ ನಾಯಕನಾಗಿ ಕೊಹ್ಲಿ ಗಳಿಸಿದ 10ನೇ ಶತಕ ಕೂಡ ಇದಾಗಿದ್ದು, ಈ ಮೂಲಕ ಕೊಹ್ಲಿ ಮಾಜಿ ಅಜರುದ್ದೀನ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ತಂಡದ ನಾಯಕನಾಗಿ ಅಜರುದ್ದೀನ್ ಒಟ್ಟು 9 ಶತಕಗಳನ್ನು ಸಿಡಿಸಿದ್ದು, ಈ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.
ಅಜರುದ್ದೀನ್ ಒಟ್ಟು 68 ಇನ್ನಿಂಗ್ಸ್ ಗಳಲ್ಲಿ 9 ಶತಕ ಸಿಡಿಸಿದ್ದರೆ, ಕೊಹ್ಲಿ 44 ಇನ್ನಿಂಗ್ಸ್ ಗಳಲ್ಲಿ 10 ಶತಕ ಸಿಡಿಸಿದ್ದಾರೆ. ಇನ್ನು ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಅವರ ದಾಖಲೆಯ ಸಮೀಪದಲ್ಲಿಯೇ ಕೊಹ್ಲಿ ಇದ್ದು, ಗವಾಸ್ಕರ್ ಒಟ್ಟು 34 ಟೆಸ್ಟ್ ಶತಕ ಸಿಡಿಸಿದ್ದಾರೆ. ಈ ಪೈಕಿ 11 ಶತಕಗಳನ್ನು ತಾವು ತಂಡದ ನಾಯಕರಾಗಿ ಗಳಿಸಿದ್ದು, ಕೊಹ್ಲಿ ಇನ್ನೊಂದು ಶತಕ ಗಳಿಸಿದರೆ ಗವಾಸ್ಕರ್ ದಾಖಲೆಯನ್ನೂ ಹಿಂದಿಕ್ಕಲಿದ್ದಾರೆ.
ಇನ್ನು ಅತ್ಯಂತ ಕಡಿಮೆ ಇನ್ನಿಂಗ್ಸ್ ನಲ್ಲಿ 10 ಶತಕ ಸಿಡಿಸಿದ ನಾಯಕರ ಪಟ್ಟಿಯಲ್ಲಿ ಕೊಹ್ಲಿ 5ನೇ ಸ್ಥಾನದಲ್ಲಿದ್ದು, ಪಟ್ಟಿಯಲ್ಲಿ ವಿಶ್ವ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅಗ್ರ ಸ್ಥಾನದಲ್ಲಿದ್ದಾರೆ. ಬ್ರಾಡ್ಮನ್ ಕೇವಲ 26 ಇನ್ನಿಂಗ್ಸ್ ಗಳಲ್ಲಿ 10 ಶತಕ ಸಿಡಿಸಿದ್ದರೆ, 36 ಇನ್ನಿಂಗ್ಸ್ ಗಳಲ್ಲಿ 10 ಶತಕ ಸಿಡಿಸಿರುವ ಶ್ರೀಲಂಕಾದ ಮಹೇಲಾ ಜಯವರ್ಧನೆ 2ನೇ ಸ್ಥಾನದಲ್ಲಿದ್ದಾರೆ. ಅಂತೆಯೇ 37 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿರುವ ಆಸ್ಟ್ರೇಲಿಯಾದ ಸ್ಟೀವೆನ್ ಸ್ಮೀತ್ 3ನೇ ಸ್ಥಾನದಲ್ಲಿದ್ದು, 34 ಇನ್ನಿಂಗ್ಸ್ ಗಳಲ್ಲಿ 10 ಶತಕ ಸಿಡಿಸಿರುವ ಆಸ್ಟ್ರೇಲಿಯಾದ ಸ್ಟೀವ್ ವಾ 4ನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


