ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ ನೀಡಿದ ಉದ್ಯಮಿ
ಇತ್ತೀಚಿಗೆ ಮುಕ್ತಾಯಗೊಂಡ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡದ ಯಶಸ್ಸಿನ ರೂವಾರಿಯಾಗಿದ್ದ ನಾಯಕಿ ಮಿಥಾಲಿ....

Published On :
ಹೈದರಾಬಾದ್: ಇತ್ತೀಚಿಗೆ ಮುಕ್ತಾಯಗೊಂಡ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡದ ಯಶಸ್ಸಿನ ರೂವಾರಿಯಾಗಿದ್ದ ನಾಯಕಿ ಮಿಥಾಲಿ ರಾಜ್ ಅವರಿಗೆ ಉದ್ಯಮಿ ವಿ ಚಾಮುಂಡೇಶ್ವರನಾಥ್ ಅವರು ಮಂಗಳವಾರ ಬಿಎಂಡಬ್ಲ್ಯೂ ಕಾರು ಕಾಣಿಕೆಯಾಗಿ ನೀಡಿದ್ದಾರೆ.
ಇಂಗ್ಲೆಂಡ್ ನಲ್ಲಿ ಮುಕ್ತಾಯವಾದ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ ಬಳಿಕ ತವರಿಗೆ ಆಗಮಿಸಿರುವ ನಾಯಕಿ ಮಿಥಾಲಿ ರಾಜ್ ಅವರಿಗೆ ಚಾಮುಂಡೇಶ್ವರನಾಥ್ ಅವರು ಐಷಾರಾಮಿ ಕಾರು ಉಡುಗೋರೆಯಾಗಿ ನೀಡಿದ್ದಾರೆ.
ಉದ್ಯಮಿಯಿಂದ ಕಾರ್ ಕೀ ಸ್ವೀಕರಿಸಿದ ಬಳಿಕ ಮಾತನಾಡಿದ ಮಿಥಾಲಿ ರಾಜ್ ಅವರು, ಚಾಮುಂಡೇಶ್ವರನಾಥ್ ಅವರು ನನಗೆ ಕಾರು ಗಿಫ್ಟ್ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2005ರಲ್ಲಿ ನಡೆದ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ವಿರುದ್ಧ ಸೋತಾಗಲೂ ಚೆವ್ರೊಲೆಟ್ ಕಾರು ಗಿಫ್ಟ್ ನೀಡಿದ್ದರು ಎಂದಿದ್ದಾರೆ.
ಕಳೆದ ವರ್ಷ ರಿಯೋ ಒಲಿಂಪಿಕ್ಸ್ ನಲ್ಲಿ ಪದಕ ವಿಜೇತರಾದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಹಾಗೂ ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೂ ಚಾಮುಂಡೇಶ್ವರನಾಥ್ ಬಿಎಂಡಬ್ಲು ಕಾರನ್ನು ಗಿಫ್ಟ್ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


