ಪಾಕ್ ವಿರುದ್ಧದ ನನ್ನ ಇನ್ನಿಂಗ್ಸ್ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಸಮರ್ಪಣೆ: ಯುವರಾಜ್ ಸಿಂಗ್
ಪಾಕಿಸ್ತಾನದ ವಿರುದ್ಧ ಆಡಿದ ಇನ್ನಿಂಗ್ಸ್ ನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಸಮರ್ಪಿಸುತ್ತೇನೆಂದು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್'ಮನ್ ಯುವರಾಜ್ ಸಿಂಗ್ ಅವರು...

Published On :
ನವದೆಹಲಿ: ಪಾಕಿಸ್ತಾನದ ವಿರುದ್ಧ ಆಡಿದ ಇನ್ನಿಂಗ್ಸ್ ನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಸಮರ್ಪಿಸುತ್ತೇನೆಂದು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್'ಮನ್ ಯುವರಾಜ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.
ಮಿನಿ ವಿಶ್ವಕಪ್ ಎಂದೇ ಖ್ಯಾತಿ ಗಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 124 ರನ್ ಗಳ ಅಂತರದಿಂದ (ಡಕ್ವರ್ಥ್ ಲೂಯಿಸ್ ನಿಯಮದಡಿ) ಬಗ್ಗು ಬಡಿದು ಭರ್ಜರಿ ನಿನ್ನೆಯಷ್ಟೇ ಗೆಲುವು ಸಾಧಿಸಿತ್ತು. ಪಾಕಿಸ್ತಾನದ ವಿರುದ್ಧ ಆಡಿದ ಯುವರಾಜ್ ಸಿಂಗ್ ಅವರು ಅದ್ಭುತವಾಗಿ ಆಡಿದ್ದರು.
ಪಾಕಿಸ್ತಾನ ವಿರುದ್ಧ ಭಾರತ ಗೆಲವು ಸಾಧಿಸಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಚರ್ ನಲ್ಲಿ ಟ್ವೀಟ್ ಮಾಡಿರುವ ಯುವರಾಜ್ ಸಿಂಗ್ ಅವರು, ನನ್ನ ಈ ಇನ್ನಿಂಗ್ಸ್ ಕ್ಯಾನ್ಸರ್ ಪೀಡಿತರಿಗೆ ಸಮರ್ಪಿಸುತ್ತೇನೆ. ಎಲ್ಲಾ ಹೀರೋಗಳಿಗೂ ಮತ್ತು ಕ್ಯಾನ್ಸರ್ ರೋಗದಿಂದ ಬದುಕುಳಿದವರಿಗೆ ಸಮರ್ಪಿಸುತ್ತೇನೆಂದು ಹೇಳಿದ್ದಾರೆ.
ಆಲ್ಲದೆ, ಲಂಡನ್ ನಲ್ಲಿ ಉಗ್ರರು ನಿನ್ನೆ ನಡೆಸಿದ್ದ ಉಗ್ರರ ದಾಳಿಗೆ ಸಂತಾಪ ಸೂಚಿಸಿರುವ ಅವರು ಉಗ್ರರ ದಾಳಿಗೆ ಒಳಗಾವದರಿಗಾಗಿ ಪ್ರಾರ್ಥನೆ ಮಾಡುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಭಾರತPakistanಪಾಕಿಸ್ತಾನYuvraj Singhಯುವರಾಜ್ ಸಿಂಗ್ಇನ್ನಿಂಗ್ಸ್InningsCancer survivor dayಕ್ಯಾನ್ಸರ್ ಪೀಡಿತರ ದಿನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


