ಕ್ರಿಕೆಟ್

ಭಾರತದ ಎದುರು ಪಾಕಿಸ್ತಾನ ಸೋಲುವುದನ್ನು ನೋಡಲು ನೋವಾಗುತ್ತದೆ: ಇಮ್ರಾನ್ ಖಾನ್

ಭಾರತದ ಎದುರು ಪಾಕಿಸ್ತಾನ ಸೋಲುವುದನ್ನು ನೋಡಲು ತುಂಬಾ ನೋವಾಗುತ್ತದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಮ್ರಾನ್ ಖಾನ್ ಹೇಳಿದ್ದಾರೆ.

ಭಾರತದ ಎದುರು ಪಾಕಿಸ್ತಾನ ಸೋಲುವುದನ್ನು ನೋಡಲು ನೋವಾಗುತ್ತದೆ: ಇಮ್ರಾನ್ ಖಾನ್
ಸಂಗ್ರಹ ಚಿತ್ರ
Published On :

ಇಸ್ಲಾಮಾಬಾದ್: ಭಾರತದ ಎದುರು ಪಾಕಿಸ್ತಾನ ಸೋಲುವುದನ್ನು ನೋಡಲು ತುಂಬಾ ನೋವಾಗುತ್ತದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಮ್ರಾನ್ ಖಾನ್ ಹೇಳಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ಎದುರು 124 ರನ್ ಗಳಿಂದ ಹೀನಾಯವಾಗಿ ಪರಾಭವಗೊಂಡಿತ್ತು. ಈ ಹಿನ್ನಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಪಾಕಿಸ್ತಾನ  ಕ್ರಿಕೆಟ್ ತಂಡದ ಮಾಜಿ ನಾಯಕ ಇಮ್ರಾನ್ ಖಾನ್, ಓರ್ವ ಆಟಗಾರನಾಗಿ ಭಾರತದ ಎದುರು ಪಾಕಿಸ್ತಾನ ಸೋಲುವುದನ್ನು ನೋಡಲು ತುಂಬಾ ನೋವಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿರುವ ಇಮ್ರಾನ್ ಖಾನ್, ವೃತ್ತಿಪರರನ್ನು ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಯಲ್ಲಿ ಆಯ್ಕೆ ಮಾಡದ ಹೊರತು ಪಾಕಿಸ್ತಾನದಲ್ಲಿ ಕ್ರಿಕೆಟ್ ಬೆಳವಣಿಗೆ ಅಸಾಧ್ಯ. ಇದೇ  ಬೆಳವಣಿಗೆ ಮುಂದುವರೆದರೆ ಇಂದಿನ ಸೋಲಿನಂತೆಯೇ ಮುಂದೆಯೂ ಸಾಕಷ್ಟು ಸೋಲು ಎದುರಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ವೃತ್ತಿಪರರೇ ಅಡಳಿತ ವಹಿಸಿಕೊಳ್ಳಬೇಕು ಆಗ ಮಾತ್ರ  ಪಾಕಿಸ್ತಾನ ಮತ್ತು ಭಾರತ ತಂಡಗಳ ನಡುವೆ ಇರುವ ಪ್ರತಿಭೆಯ ಕೊರತೆ ತುಂಬಲು ಸಾಧ್ಯವಾಗುತ್ತದೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್ ಅವರು, ಸಂಪೂರ್ಣ ಸಾಮರ್ಥ್ಯದಿಂದ ಭಾರತದ ವಿರುದ್ಧ ಆಡಿ  ಎಂದು ಪಾಕ್ ತಂಡಕ್ಕೆ ಕಿವಿಮಾತು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.