ಟೀಂ ಇಂಡಿಯಾ ಕೋಚ್ ಹುದ್ದೆಗೆ 2 ಸಾಲಿನ ಅರ್ಜಿ ಕಳುಹಿಸಿದ ಸೆಹ್ವಾಗ್
ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟೀಂ ಇಂಡಿಯಾ ತಂಡದ ಕೋಚ್ ಹುದ್ದೆಗೆ ಎರಡು ಸಾಲಿನ ಅರ್ಜಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ...

Published On :
ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟೀಂ ಇಂಡಿಯಾ ತಂಡದ ಕೋಚ್ ಹುದ್ದೆಗೆ ಎರಡು ಸಾಲಿನ ಅರ್ಜಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಕಳುಹಿಸಿದ್ದಾರೆ.
ಅರ್ಜಿಯಲ್ಲಿ ನಾನು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾರ್ಗದರ್ಶಿ ಮತ್ತು ಕೋಚ್ ಆಗಿ ಕೆಲಸ ಮಾಡಿದ್ದೇನೆ. ತಂಡದಲ್ಲಿನ ಆಟಗಾರರು ಉತ್ತಮವಾಗಿ ಆಡಿದ್ದಾರೆ ಎಂದು ಎರಡು ಸಾಲಿನ ಅರ್ಜಿಯನ್ನು ಕಳುಹಿಸಿದ್ದಾರೆ.
ಸುಪ್ರೀಂಕೋರ್ಟ್ ನೇಮಿಸಿರುವ ಆಡಳಿತ ಮಂಡಳಿಯ ಅಧಿಕಾರಿಗಳು ಸೆಹ್ವಾಗ್ ಅವರ ಅರ್ಜಿಯನ್ನು ಕಂಡು ದಿಗ್ಬ್ರಾಂತರಾಗಿದ್ದು ಕೂಡಲೇ ಅಧಿಕಾರಿಗಳು ಸೆಹ್ವಾಗ್ ಗೆ ಪೂರ್ಣ ಪ್ರಮಾಣದ ಅರ್ಜಿಯನ್ನು ಕಳುಹಿಸುವಂತೆ ಸೂಚಿಸಿದ್ದಾರೆ.
ಟೀಂ ಇಂಡಿಯಾ ಕೋಚ್ ಹುದ್ದೆ ರೇಸ್ ನಲ್ಲಿ ವೀರೇಂದ್ರ ಸೆಹ್ವಾಗ್ ಸೇರಿದಂತೆ ಪ್ರಸಕ್ತ ಕೋಚ್ ಅನಿಲ್ ಕುಂಬ್ಳೆ, ಆಸ್ಟ್ರೇಲಿಯಾ ಮಾಜಿ ಟೆಸ್ಟ್ ಆಟಗಾರ ಟಾಮ್ ಮೂಡಿ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಲಾಲ್ ಚಂದ್ ರಜಪೂತ್, ದೊಡ್ಡ ಗಣೇಶ್ ಮತ್ತು ಮಾಜಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಕೋಚ್ ರಿಚರ್ಡ್ ಪೇಬಸ್ ಇದ್ದಾರೆ.
ಚಾಂಪಿಯನ್ಸ್ ಟ್ರೋಫಿಯ ಬಳಿಕ ಕೋಚ್ ಅನಿಲ್ ಕುಂಬ್ಳೆ ಅವರ ಅವಧಿ ಮುಕ್ತಾಯಗೊಳ್ಳಲಿದ್ದು ಬಿಸಿಸಿಐ ಕೋಚ್ ಹುದ್ದೆಗಾಗಿ ಅರ್ಜಿಗಳನ್ನು ಆಹ್ವಾನಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


