ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ ಮುಕ್ತಾಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಹೊಸ ಕೋಚ್?

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆಗಳು ಇವೆ...

ಚಾಂಪಿಯನ್ಸ್ ಟ್ರೋಫಿ ಮುಕ್ತಾಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಹೊಸ ಕೋಚ್?
ಅನಿಲ್ ಕುಂಬ್ಳೆ
Published On :
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆಗಳು ಇವೆ. 
ಟೀಂ ಇಂಡಿಯಾ ಕೋಚ್ ಹುದ್ದೆಗೆ ಪ್ರಸಕ್ತ ಕೋಚ್ ಅನಿಲ್ ಕುಂಬ್ಳೆ ಅವರು ಅರ್ಜಿ ಸಲ್ಲಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅನಿಲ್ ಕುಂಬ್ಳೆ ಅವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಅವರನ್ನು ನೇರವಾಗಿ ಸಂದರ್ಶನ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಚಾಂಪಿಯನ್ಸ್ ಟ್ರೋಫಿ ಮುಕ್ತಾಯದೊಂದಿಗೆ ಅನಿಲ್ ಕುಂಬ್ಳೆ ಅವರ ಕೋಚ್ ಗುತ್ತಿಗೆ ಮುಕ್ತಾಯಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಬಿಸಿಸಿಐ ಸಹ ಅರ್ಜಿಗಳನ್ನು ಆಹ್ವಾನಿಸಿದೆ. ಇನ್ನು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಟಾಮ್ ಮೂಡಿ, ರಿಚರ್ಡ್ ಪೇಬಸ್, ಲಾಲ್ ಚಂದ್ ರಾಜಪೂತ್ ಮತ್ತು ದೊಡ್ಡ ಗಣೇಶ್ ಅವರು ಅರ್ಜಿಗಳನ್ನು ಸಲ್ಲಿಸಿದ್ದಾರೆ. 
ಕೋಚ್ ಹುದ್ದೆಗೆ ಅರ್ಜಿ ಸಲ್ಲಿರುವವರನ್ನು ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಅವರು ಸಂದರ್ಶನ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.