ಆಂಗ್ಲರ ನಾಡಲ್ಲಿ ಧವನ್ ತ್ರಿವಿಕ್ರಮ: ಅತೀ ಹೆಚ್ಚು ಬ್ಯಾಟಿಂಗ್ ಸರಾಸರಿ ಪಟ್ಟಿಯಲ್ಲಿ ಅಗ್ರ ಸ್ಥಾನ
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಸೋತಿದ್ದರೂ ಬ್ಯಾಟಿಂಗ್ ನಲ್ಲಿ ಪರಾಕ್ರಮ ಮೆರೆದ ಶಿಖರ್ ಧವನ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Published On :
ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಸೋತಿದ್ದರೂ ಬ್ಯಾಟಿಂಗ್ ನಲ್ಲಿ ಪರಾಕ್ರಮ ಮೆರೆದ ಶಿಖರ್ ಧವನ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಆಂಗ್ಲರ ನಾಡಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಶಿಖರ್ ಧವನ್ ಅತೀ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿರುವ ಬ್ಯಾಟ್ಸಮನ್ ಗಳ ಪಟ್ಟಿಯಲ್ಲಿ ಆಗ್ರ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಧವನ್ 97.65 ಸರಾಸರಿಯಲ್ಲಿ 125 ರನ್ ಗಳನ್ನು ಕಲೆಹಾಕಿದ್ದರು. ಈ ಇನ್ನಿಂಗ್ಸ್ ಸೇರಿದಂತೆ ಇಂಗ್ಲೆಂಡ್ ನಲ್ಲಿ ಧವನ್ ಒಟ್ಟು 11 ಇನ್ನಿಂಗ್ಸ್ ಗಳಲ್ಲಿ 79.00 ಸರಾಸರಿಯಲ್ಲಿ 711 ರನ್ ಗಳಿಸಿದ್ದಾರೆ. ಮೂಲಕ ಇಂಗ್ಲೆಂಡ್ ನಲ್ಲಿ ಅತೀ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿರುವ ಮೊದಲ ವಿದೇಶಿ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಈ ಹಿಂದೆ ಈ ಧಾಕಲೆ ವೆಸ್ಟ್ ಇಂಡೀಸ್ ದಂತಕಥೆ ವಿವಿಯನ್ ರಿಚರ್ಡ್ಸ್ ಅವರ ಹೆಸರಲ್ಲಿತ್ತು. ಇಂಗ್ಲೆಂಡ್ ನಲ್ಲಿ 31 ಇನ್ನಿಂಗ್ಸ್ ಆಡಿರುವ ಅವರು 64.04 ಸರಾಸರಿಯಲ್ಲಿ 1345 ರನ್ ಪೇರಿಸಿದ್ದಾರೆ. ಉಳಿದಂತೆ ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸ್ 13 ಇನ್ನಿಂಗ್ಸ್ ಗಳಲ್ಲಿ 63.16 ಸರಾಸರಿಯಲ್ಲಿ 758 ರನ್ ಗಳಿಸಿದ್ದಾರೆ. ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಹಶೀಮ್ ಆಮ್ಲಾ 17 ಇನ್ನಿಂಗ್ಸ್ ಗಳಲ್ಲಿ 58.28ರ ಸರಾಸರಿಯಲ್ಲಿ 816 ರನ್ ಗಳನ್ನು ಪೇರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Londonಲಂಡನ್indiaಭಾರತSri Lankaಶ್ರೀಲಂಕಾShikhar Dhawanಶಿಖರ್ ಧವನ್Cricket Offbeatಕ್ರಿಕೆಟ್ ಸ್ವಾರಸ್ಯICC Champions Trophyಐಸಿಸಿ ಚಾಂಪಿಯನ್ಸ್ ಟ್ರೋಫಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


