ಕ್ರಿಕೆಟ್

ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಲಂಕಾ ಗೆಲುವಿಗೆ 322 ರನ್‌ ಗಳ ಗುರಿ

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ,...

ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಲಂಕಾ ಗೆಲುವಿಗೆ 322 ರನ್‌ ಗಳ ಗುರಿ
ಶತಕ ಸಿಡಿಸಿ ಸಂಭ್ರಮಿಸುತ್ತಿರುವ ಶಿಖರ್ ಧವನ್
Published On :
ಲಂಡನ್‌: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ಶ್ರೀಲಂಕಾ ಗೆಲುವಿಗೆ 322 ರನ್‌ ಗಳ ಬೃಹತ್ ಟಾರ್ಗೆಟ್ ನೀಡಿದೆ.
ಟಾಸ್ ಸೋತರು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಭಾರತ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 321 ರನ್‌ ಗಳಿಸಿತು. ಟಾಸ್‌ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.
ಭಾರತದ ಪರ ಆರಂಭಿಕ ಆಟಗಾರ ಶಿಖರ್‌ ಧವನ್‌  ಅಮೋಘ ಶತಕ ದಾಖಲಿಸಿದರು. ರೋಹಿತ್‌ ಶರ್ಮಾ ಮತ್ತು ಮಹೇಂದ್ರ ಸಿಂಗ್ ದೋನಿ ಅರ್ಧಶತಕ ಗಳಿಸಿದರು.  ವೇಗದ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೇದಾರ್ ಜಾದವ್‌ 25 ರನ್‌ ಸಿಡಿಸಿದರು.
ಶ್ರೀಲಂಕಾದ ಪರ ಮಲಿಂಗ 2 ವಿಕೆಟ್‌ ಪಡೆದರೆ, ಪ್ರದೀಪ್‌, ಲಕ್‌ಮಲ್‌, ಪೆರೇರಾ, ಗುಣರತ್ನೆ ತಲಾ 1 ವಿಕೆಟ್‌ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.