ಐಸಿಸಿ ಚಾಂಪಿಯನ್ಸ್ ಟ್ರೋಫಿ; ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಗುರುವಾರ ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಗುರುವಾರ ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಲಂಡನ್ ನ ದಿ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಪಾಕಿಸ್ತಾನದ ವಿರುದ್ಧ ಗೆದ್ದು ಆತ್ಮವಿಶ್ವಾಸದಿಂದಿರುವ ಕೊಹ್ಲಿ ಪಡೆ ಎಂಜಲೋ ಮ್ಯಾಥ್ಯೂಸ್ ಪೆಡಯನ್ನು ಮಣಿಸಿ ಸೆಮಿಫೈನಲ್ ಗೇರಲು ಸಿದ್ಧತೆ ನಡೆಸಿಕೊಂಡಿದೆ.
ಹಾಲಿ ಚಾಂಪಿಯನ್ ಎನ್ನುವ ಹೆಸರಿಗೆ ತಕ್ಕಂತೆ ಆಟವಾಡುತ್ತಿರುವ ಭಾರತ, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 124 ರನ್‌ಗಳ ಅಂತರದ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಶುಭಾರಂಭ ಮಾಡಿತ್ತು. ಇಂದು ಸಿಂಹಳೀಯರ ಬೇಟೆಯಾಡಿ ಸೆಮಿಫೈನಲ್‌ಗೇರುವ ತವಕದಲ್ಲಿದೆ. ಮೊದಲ ಪಂದ್ಯದಲ್ಲಿ ಆಫ್ರಿಕನ್ನರ ವಿರುದ್ಧ ಹೀನಾಯವಾಗಿ ಸೋತಿರುವ ಲಂಕನ್ನರಿಗಿಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಪಂದ್ಯ ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಲಂಕಾ ತಂಡದ ನಾಯಕ ಎಂಜಲೋ ಮ್ಯಾಥ್ಯೂಸ್ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಗಾಯದ ಸಮಸ್ಯೆಯಿಂದಾಗಿ ಅವರು ಬ್ಯಾಟಿಂಗ್ ಮಾತ್ರ ಮಾಡಲಿದ್ದಾರೆ. ಬೌಲಿಂಗ್ ಮಾಡುವುದಿಲ್ಲ ಎಂದು ಲಂಕಾ ತಂಡ ಸ್ಪಷ್ಟಪಡಿಸಿದೆ.
ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿ ಪಡಿಸುವ ಆತಂಕ ಎದುರಾಗಿದ್ದು, ಮತ್ತೆ ಡಕ್ವರ್ಥ್ ಲೂಯಿಸ್ ನಿಯಮ ಪ್ರಾಮುಖ್ಯತೆ ಪಡೆಯುವ ಸಾಧ್ಯತೆ ಇದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ಭಾರತಕ್ಕೆ ಲಾಭವಾಗಲಿದ್ದು, ಒಂದು ಗೆಲುವಿನಿಂದ ಭಾರತ 2 ಅಂಕ ಪಡೆದುಕೊಂಡಿದೆ. ಪಂದ್ಯ ರದ್ದಾದರೆ ಒಂದು ಅಂಕ ಸಿಗಲಿದೆ. ಜತೆಗೆ ನೆಟ್ ರನ್‌ರೇಟ್ ಸಹ ಅತ್ಯುತ್ತಮವಾಗಿರುವ ಕಾರಣ, ಭಾರತಕ್ಕೆ ಸೆಮೀಸ್ ಅವಕಾಶ ಮುಕ್ತವಾಗಿರಲಿದೆ.
ಭಾರತದ ಪರ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಶಿಖರ್ ಧವನ್ ಫಾರ್ಮ್ ಕಂಡುಕೊಂಡಿರುವುದು ಭಾರತಕ್ಕೆ ಆನೆ ಬಲ ಬಂದಂತಾಗಿದ್ದು, ನಾಯಕ ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಹಾರ್ದಿಕ್ ಪಾಂಡ್ಯ ಎಡ್ಜ್ ಬ್ಯಾಸ್ಟನ್ ಪ್ರದರ್ಶನವನ್ನೇ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


