ಕ್ರಿಕೆಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ: ದಾಖಲೆ ಬರೆದ ಶಿಖರ್ ಧವನ್-ರೋಹಿತ್ ಶರ್ಮಾ ಜೋಡಿ

ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಜೋಡಿ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ದಾಖಲೆ ಬರೆದ ಶಿಖರ್ ಧವನ್-ರೋಹಿತ್ ಶರ್ಮಾ ಜೋಡಿ
ಕ್ರಿಕ್ ಇನ್ಫೋ ಚಿತ್ರ
Published On :
ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಜೋಡಿ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಜೋಡಿ ಅತ್ಯಂತ ಯಶಸ್ವೀ ಆರಂಭಿಕ ಜೋಡಿ ಎಂಬ ದಾಖಲೆ ಬರೆದಿದ್ದಾರೆ. ಆರಂಭಿಕರಾಗಿ ಒಟ್ಟು 7 ಇನ್ನಿಂಗ್ಸ್ ಗಳಲ್ಲಿ ಕಣಕ್ಕಿಳಿದಿರುವ ಈ ಜೋಡಿ ಒಟ್ಟು 636 ರನ್ ಗಳನ್ನು ಕಲೆಹಾಕಿದ್ದು, ಸತತವಾಗಿ  ಶತಕದ ಜೊತೆಯಾಟ ಸಾಧಿಸಿ ಹೊಸ ಭಾರತೀಯ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ, ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧ ಸತತವಾಗಿ ಮೂರು ಬಾರಿ ಶತಕದ ಜೊತೆಯಾಟ ಆಡಿರುವ ಈ ಜೋಡಿ ವಿಶ್ವದ ಅತ್ಯಂತ ಯಶಸ್ವೀ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಆ  ಮೂಲಕ ಅತ್ಯಂತ ಯಶಸ್ವೀ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ ಮತ್ತು ಶಿವನಾರಾಯಣ್ ಚಂದ್ರಪಾಲ್ ಅವರ ದಾಖಲೆಯನ್ನು ಶರ್ಮಾ-ಧವನ್ ಜೋಡಿ ಹಿಂದಿಕ್ಕಿದೆ.
ಬಲಗೈ ಬ್ಯಾಟ್ಸ್ ಮನ್ ರೋಹಿತ್ ಶರ್ಮ, ಎಡಗೈ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ 123ರನ್ ಜೊತೆಯಾಟ, ಬರ್ಮಿಂಗ್ ಹ್ಯಾಮ್ ನಲ್ಲಿ ಪಾಕಿಸ್ತಾನ ವಿರುದ್ಧ 136ರನ್ ಹಾಗೂ ಒವಲ್ ನಲ್ಲಿ ಶ್ರೀಲಂಕಾ ವಿರುದ್ಧ ಇಂದು 138ರನ್ ಜೊತೆಯಾಟ ಸಾಧಿಸಿ,  ಹೊಸ ದಾಖಲೆ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.