ನಮ್ಮದು ಅಜೇಯ ತಂಡವಲ್ಲ, ಗೆಲುವುಗಳ ಸರಣಿಗೆ ಕೊನೆಗೊಂದು ಅಂತ್ಯವಿರುತ್ತದೆ: ಕೊಹ್ಲಿ
ನಮ್ಮದು ಅಜೇಯ ತಂಡವಲ್ಲ, ಗೆಲುವುಗಳ ಸರಣಿಗೆ ಕೊನೆಗೊಂದು ಅಂತ್ಯವಿರುತ್ತದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ...

Published On :
ಲಂಡನ್: ನಮ್ಮದು ಅಜೇಯ ತಂಡವಲ್ಲ, ಗೆಲುವುಗಳ ಸರಣಿಗೆ ಕೊನೆಗೊಂದು ಅಂತ್ಯವಿರುತ್ತದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಸೋಲನುಭವಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ತಂಡ ಬೃಹತ್ ಮೊತ್ತ ಪೇರಿಸಿತ್ತು ಆದರೆ ಬೌಲರ್ ಗಳು ಎದುರಾಳಿ ತಂಡವನ್ನು ಕಟ್ಟಿಹಾಕುವಲ್ಲಿ ವಿಫಲರಾಗಿದ್ದು ಎದುರಾಳಿ ತಂಡ ಕೂಡ ಬಲಿಷ್ಠವಾಗಿತ್ತು. ನಾವು ಚೆನ್ನಾಗಿ ಆಡಿದ್ದೇವೆ, ಎದುರಾಳಿ ತಂಡ ನಮಗಿಂತ ಚೆನ್ನಾಗಿ ಆಡಿತು ಎಂದು ಕೊಹ್ಲಿ ಹೇಳಿದ್ದಾರೆ.
ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದಿರುವ ಭಾರತ ತನ್ನ ಕೊನೆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲೆಬೇಕಾದ ಒತ್ತಡದಲ್ಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಭಾನುವಾರ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaSri Lankaಶ್ರೀಲಂಕಾVirat Kohliವಿರಾಟ್ ಕೊಹ್ಲಿChampions Trophy 2017ಚಾಂಪಿಯನ್ಸ್ ಟ್ರೋಫಿ 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


