ಚಾಂಪಿಯನ್ಸ್ ಟ್ರೋಫಿ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ
ಚಾಂಪಿಯನ್ಸ್ ಟ್ರೋಫಿ 2017 ಸರಣಿಯ ಜೂ.11 ರ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದ್ದು, ಭಾರತದ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

Published On :
ಲಂಡನ್: ಚಾಂಪಿಯನ್ಸ್ ಟ್ರೋಫಿ 2017 ಸರಣಿಯ ಜೂ.11 ರ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದ್ದು, ಭಾರತದ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಭಾರತ ತಂಡ ಹಾಗೂ ದಕ್ಷಿಣ ಆಫ್ರಿಕಾಗೂ ಈ ಪಂದ್ಯ ನಿರ್ಣಾಯಕವಾಗಿದ್ದು ಫೈನಲ್ಸ್ ಪ್ರವೇಶಿಸಬೇಕೆಂದರೆ ಈ ಪಂದ್ಯ ಗೆಲ್ಲುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ಮೇಲೆ ಅಪಾರ ನಿರೀಕ್ಷೆಗಳಿದ್ದು, ನಾಯಕ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ಒತ್ತಡವಿದೆ.
ಇನ್ನು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ, ಎಬಿ ಡಿವಿಲಿಯರ್ಸ್ ಗೆ ತಂಡವನ್ನು ಮುನ್ನಡೆಸಿ ಗೆಲುವು ಸಾಧಿಸಲು ಇದೊಂದು ಉತ್ತಮ ಅವಕಾಶ ಎಂದು ವಿಶ್ಲೇಷಿಸಲಾಗುತ್ತಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಎಬಿಡಿ ವಿಲಿಯರ್ಸ್ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಪಂದ್ಯಕ್ಕೆ ಅಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಗೆಲ್ಲಲೇಬೇಕಾದ ಒತ್ತಡದಲ್ಲಿ ಉಭಯ ತಂಡಗಳೂ ಇದ್ದು, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೂ ರನ್ ರೇಟ್ ನಲ್ಲಿ ಮುಂದಿರುವ ಕಾರಣ ಭಾರತ ಸೆಮಿಫೈನಲ್ಸ್ ಪ್ರವೇಶಿಸುವುದು ಸಾಧ್ಯವಿದ್ದು ಇಂದಿನ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


