ಕ್ರಿಕೆಟ್

ಮಳೆಯಿಂದಾಗಿ ಭಾರತ-ಆಫ್ರಿಕಾ ಪಂದ್ಯ ರದ್ಧಾದರು ಸೆಮಿಫೈನಲ್‌ಗೆ ಟೀಂ ಇಂಡಿಯಾ!

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಇನ್ನೇನು ಕೊನೆಯ ಘಟ್ಟ ಬಂದು ಮುಟ್ಟಿದೆ. ಇಂದು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ...

ಮಳೆಯಿಂದಾಗಿ ಭಾರತ-ಆಫ್ರಿಕಾ ಪಂದ್ಯ ರದ್ಧಾದರು ಸೆಮಿಫೈನಲ್‌ಗೆ ಟೀಂ ಇಂಡಿಯಾ!
ಟೀಂ ಇಂಡಿಯಾ
Published On :
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಇನ್ನೇನು ಕೊನೆಯ ಘಟ್ಟ ಬಂದು ಮುಟ್ಟಿದೆ. ಇಂದು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸೆಮಿಫೈನಲ್ ಎಂಟ್ರಿ ಕೊಡುವ ನಿರ್ಣಯಕ ಪಂದ್ಯ ನಡೆಯುತ್ತಿದೆ. 
ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದ್ದು ಯಾರು ಪಂದ್ಯ ಗೆಲ್ಲುತ್ತಾರೆ ಅವರು ನೇರವಾಗಿ ಸೆಮಿಫೈನಲ್ ತಲುಪುತ್ತಾರೆ. ಇನ್ನೊಂದೆಡೆ ಹಲವು ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಅಂತ ಈ ಪಂದ್ಯವೂ ಮಳೆಯಿಂದಾ ರದ್ದಾಗಿದ್ದೇ ಆದರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುತ್ತದೆ. ಇನ್ನು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ ರನ್ ರೇಟ್ 1.272 ಇದ್ದು ದಕ್ಷಿಣ ಆಫ್ರಿಕಾ 1.000 ಹೊಂದಿದೆ ಇದರೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ತಲುಪುತ್ತದೆ. 
ಬಿ ಗುಂಪಿನಲ್ಲಿರುವ ನಾಲ್ಕು ತಂಡಗಳು ಒಟ್ಟಾರೆ ಒಂದು ಪಂದ್ಯಗಳನ್ನು ಗೆಲ್ಲುವ ಮೂಲಕ ತಲಾ 2 ಅಂಕಗಳೊಂದಿಗೆ ಸಮಬಲ ಸಾಧಿಸಿವೆ. ನಾಲ್ಕು ತಂಡಗಳಿಗೂ ಒಂದೇ ಪಂದ್ಯ ಬಾಕಿ ಇರುವುದರಿಂದ ಯಾರು ಪಂದ್ಯ ಗೆಲ್ಲುತ್ತಾರೋ ಅವರು ಸೆಮಿಫೈನಲ್ ಗೆ ಎಂಟ್ರಿ ಕೊಡುತ್ತಾರೆ. 
ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಲಂಡನ್ ನಲ್ಲಿ ಶುರುವಾಗಿದ್ದು ಟಾಸ್ ಗೆದ್ದಿರುವ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.