ಕ್ರಿಕೆಟ್

ಸಾವಿರ ರನ್ ಗಳಿಕೆ: ಸಚಿನ್, ಸೌರವ್ ದಾಖಲೆ ಹಿಂದಿಕ್ಕಿದ ಶಿಖರ್ ಧವನ್!

ಅತ್ಯುತ್ತಮ ಫಾರ್ಮ್ ನಲ್ಲಿರುವ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ವೇಗದ ಸಾವಿರ ರನ್ ಪೂರೈಸಿದ ಭಾರತೀಯ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

ಸಾವಿರ ರನ್ ಗಳಿಕೆ: ಸಚಿನ್, ಸೌರವ್ ದಾಖಲೆ ಹಿಂದಿಕ್ಕಿದ ಶಿಖರ್ ಧವನ್!
ಸಂಗ್ರಹ ಚಿತ್ರ
Published On :

ಲಂಡನ್: ಅತ್ಯುತ್ತಮ ಫಾರ್ಮ್ ನಲ್ಲಿರುವ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ವೇಗದ ಸಾವಿರ ರನ್ ಪೂರೈಸಿದ ಭಾರತೀಯ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

ಪ್ರಸಕ್ತ ಸಾಲಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳನ್ನು ಭಾರಿಸಿರುವ ಶಿಖರ್ ಧವನ್ ಇದೀಗ ಸಾವಿರ ರನ್ ಗಳ ಪೂರೈಕೆಯಲ್ಲೂ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಧವನ್‌ ಆಡಿರುವ 16 ಇನಿಂಗ್ಸ್‌ನಲ್ಲಿ 1000 ರನ್‌ ಗಳಿಸುವ ಮೂಲಕ ವೇಗದ ಸಾವಿರ ರನ್ ಗಳಿಕೆ ಮಾಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ. ಈ ಹಿಂದೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 18 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಗಳಿಸಿದ್ದರೆ, ಸೌರವ್ ಗಂಗೂಲಿ 20 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಪೂರೈಸಿದ್ದರು.

ಧವನ್ ಇದೀಗ ಇಬ್ಹರೂ ದಿಗ್ಗಜ ಆಟಗಾರರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಟೂರ್ನಿಯಲ್ಲೂ ಗರಿಷ್ಠ ರನ್ ಗಳಿಕೆಯಲ್ಲಿ ಧವನ್ ಗೆ ಅಗ್ರ ಸ್ಥಾನ
ಇನ್ನು ಹಾಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಕೂಡ ಧವನ್ ಪಾರುಪತ್ಯ ಮುಂದುವರೆದಿದ್ದು, ಪ್ರಸಕ್ತ ಪಂದ್ಯಾವಳಿಯಲ್ಲಿ 1 ಶತಕ ಹಾಗೂ 2 ಅರ್ಧಶತಕ ಬಾರಿಸಿದ ಧವನ್‌, ಗರಿಷ್ಠ ರನ್‌ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. 3 ಪಂದ್ಯಗಳಿಂದ ಧವನ್‌ ಒಟ್ಟು 271 ರನ್‌ ಕಲೆಹಾಕಿದ್ದು, 2ನೇ ಸ್ಥಾನದಲ್ಲಿರುವ ಕೇನ್‌ ವಿಲಿಯಮ್ಸನ್‌ ಗಿಂತ 27 ರನ್‌ ಮುಂದಿದ್ದಾರೆ. 2013ರ ಚಾಂಪಿಯನ್ಸ್‌ ಟ್ರೋಫಿಯಲ್ಲೂ ಧವನ್‌ ಗರಿಷ್ಠ ರನ್‌ ಕಲೆ ಹಾಕಿ ಗೋಲ್ಡನ್‌ ಬ್ಯಾಟ್‌ ಪ್ರಶಸ್ತಿ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.