ಐಸಿಸಿ ಚಾಂಪಿಯನ್ಸ್ ಟ್ರೋಫಿ: ಶ್ರೀಲಂಕಾ ಮಣಿಸಿದ ಪಾಕಿಸ್ತಾನ ಸೆಮೀಸ್ ಗೆ!
ತೀವ್ರ ಕುತೂಹಲ ಕೆರಳಿಸಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 3 ವಿಕೆಟ್ ಗಳ ಅಂತರದಿಂದ ಲಂಕಾ ತಂಡವನ್ನು ಮಣಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಕಾರ್ಡಿಫ್: ತೀವ್ರ ಕುತೂಹಲ ಕೆರಳಿಸಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 3 ವಿಕೆಟ್ ಗಳ ಅಂತರದಿಂದ ಲಂಕಾ ತಂಡವನ್ನು ಮಣಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಕಾರ್ಡಿಫ್ ನಲ್ಲಿ ನಿನ್ನೆ ನಡೆದ ಪಂದ್ಯದಸ್ಸಿ ಟಾಸ್ ಗೆದ್ದ ಪಾಕಿಸ್ತಾನ ಲಂಕಾ ತಂಡವನ್ನು ಬ್ಯಾಟಿಂಗ್ ಆಹ್ನಾನ ಮಾಡಿತು. ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ತಂಡ 49.2 ಓವರ್ ಗಳಲ್ಲಿ 236 ರನ್ ಗಳಿಗೆ ಆಲ್ ಔಟ್ ಆಯಿತು. ಉತ್ತಮ ಆರಂಭದ ಹೊರತಾಗಿಯೂ ನಿಗದಿತವಾಗಿ ವಿಕೆಟ್ ಕಳೆದುಕೊಂಡ ಶ್ರೀಲಂಕಾಗೆ ಆರಂಭಿಕ ಆಟಗಾರ ಡಿಕ್ ವೆಲ್ಲಾ ಬೆನ್ನೆಲುಬಾಗಿ ನಿಂತಿದ್ದರಾದರೂ, ಅವರಿಗೆ ತಂಡದ ಇತರೆ ಸದಸ್ಯರಿಂದ ಸಾಥ್ ದೊರೆಯಲಿಲ್ಲ. ಮಹಮದ್ ಆಮೀರ್, ಜುನೈದ್ ಖಾನ್ ಮತ್ತು ಹಸನ್ ಅಲಿ ಅವರ ಕರಾರುವಕ್ಕಾದ ಬೌಲಿಂದ್ ದಾಳಿ ತತ್ತರಿಸಿದ ಶ್ರೀಲಂಕಾ 236 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.
ಆ ಮೂಲಕ ಪಾಕಿಸ್ತಾನಕ್ಕೆ ಗೆಲ್ಲಲು 237 ರನ್ ಗಳ ಗುರಿ ನೀಡಿತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನಕ್ಕೆ ಅಜರ್ ಅಲಿ (34 ರನ್) ಮತ್ತು ಫಕರ್ ಝಮಾನ್ (50 ರನ್) ಉತ್ತಮ ಆರಂಭ ನೀಡಿದರು. ಆದರೆ ಆರಂಭಿಕ ಜೋಡಿ ಬೇರ್ಪಡುತ್ತಿದ್ದಂತೆಯೇ ದಿಢೀರ್ ಕುಸಿತ ಕಂಡ ಪಾಕಿಸ್ತಾನ ಕೇವಲ 35 ರನ್ ಗಳ ಅಂತರಲ್ಲಿ ಪ್ರಮುಖ ಮೂರು ವಿಕೆಟ್ ಗಳನ್ನು ಕಳೆದುಕೊಂಡಿತು. ಈ ಹಂತಜಲ್ಲಿ ತಂಡದ ನೆರವಿಗೆ ನಿಂತ ಸರ್ಫರಾಜ್ ಅಹ್ಮದ್ ಅಜೇಯರಾಗಿ ನಿಂತು ಆಟವಾಡಿದರು. ಅಂತಿಮವಾಗಿ ಪಾಕಿಸ್ತಾನ ತಂಡ ಇನ್ನೂ 31 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್ ಕಳೆದುಕೊಂಡು 237 ರನ್ ಗಳ ಗುರಿ ತಲುಪಿತ್ತು.
ಅ ಮೂಲಕ ಸೆಮೀಸ್ ನಲ್ಲಿ ತನ್ನ ಸ್ಥಾನ ಖಚಿತ ಪಡಿಸಿಕೊಂಡಿತು. ಇನ್ನು ಅಜೇಯ ಆಟವಾಡಿದ ಸರ್ಫರಾಜ್ ಅಹ್ಮದ್ ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


