ಚಾಂಪಿಯನ್ಸ್ ಟ್ರೋಫಿ: ಮೊದಲ ಸೆಮಿಫೈನಲ್ ಪಾಕಿಸ್ತಾನಕ್ಕೆ 212 ರನ್ ಗುರಿ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದ್ದು ಇಂಗ್ಲೆಂಡ್ ಪಾಕಿಸ್ತಾನಕ್ಕೆ 212 ರನ್ ಗಳ ಅಲ್ಪ ಮೊತ್ತದ...

Published On :
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದ್ದು ಇಂಗ್ಲೆಂಡ್ ಪಾಕಿಸ್ತಾನಕ್ಕೆ 212 ರನ್ ಗಳ ಅಲ್ಪ ಮೊತ್ತದ ಗುರಿಯನ್ನು ನೀಡಿದೆ.
ಲಂಡನ್ ನ ಕಾರ್ಡಿಫ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 49.5 ಓವರ್ ನಲ್ಲಿ 211 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಪಾಕಿಸ್ತಾನಕ್ಕೆ 212 ರನ್ ಗಳ ಗುರಿ ನೀಡಿದೆ.
ಇಂಗ್ಲೆಂಡ್ ಪರ ಬೈರ್ಸ್ಟೋವ್ 43, ಹಾಲೆಸ್ 13, ಜೋ ರೂಟ್ 46, ಇಯಾನ್ ಮಾರ್ಗನ್ 33, ಬೇನ್ ಸ್ಟೋಕ್ಸ್ 34 ರನ್ ಗಳಿಸಿದ್ದಾರೆ.
ಪಾಕಿಸ್ತಾನ ಪರ ಹಸನ್ ಅಲಿ 3, ಜುನೈದ್ ಖಾನ್, ರಾಯಿಸ್ ತಲಾ 2 ವಿಕೆಟ್ ಪಡೆದಿದ್ದಾರೆ.
ಪ್ರಸ್ತುತ ಪಾಕಿಸ್ತಾನ 3 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 18 ರನ್ ಗಳಿಸಿ ಆಡುತ್ತಿದೆ. ಪಾಕ್ ಪರ ಫಕ್ರಾ ಜಮಾನ್ 11 ಮತ್ತು ಅಝರ್ ಅಲಿ 5 ರನ್ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


