ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂಗ್ಲೆಂಡ್ ಮಣಿಸಿದ ಪಾಕಿಸ್ತಾನ ಫೈನಲ್ ಗೆ!
ತೀವ್ರ ಕುತೂಹಲ ಕೆರೆಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಪಾಕಿಸ್ತಾನ ಫೈನಲ್ ಗೇರಿದೆ.

Published On :
ಲಂಡನ್: ತೀವ್ರ ಕುತೂಹಲ ಕೆರೆಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಪಾಕಿಸ್ತಾನ ಫೈನಲ್ ಗೇರಿದೆ.
ಲಂಡನ್ ನ ಕಾರ್ಡಿಫ್ ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 212ರನ್ ಗಳ ಸಾಧಾರಣ ಗುರಿಯನ್ನು ಪಾಕಿಸ್ತಾನ ತಂಡ ಕೇವಲ 37.1 ಓವರ್ ಗಳಲ್ಲಿ ಗುರಿ ಮುಟ್ಟಿ ಅರ್ಹವಾಗಿಯೇ ಫೈನಲ್ ಗೇರಿದೆ. ಇಂಗ್ಲೆಂಡ್ ನೀಡಿದ 212 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡಕ್ಕೆ ಆರಂಭಿಕ ಆಟಗಾರರಾದ ಅಜರ್ ಅಲಿ (76 ರನ್) ಹಾಗೂ ಫಖರ್ ಝಮಾನ್ (57 ರನ್) ಉತ್ತಮ ಆರಂಭ ಒದಗಿಸಿದರು. ನಿಧಾನಗತಿಯಲ್ಲೇ ಬ್ಯಾಟಿಂಗ್ ಆರಂಭಿಸಿದರೂ ತಂಡಕ್ಕೆ ಯಾವುದೇ ರೀತಿಯ ಅಪಾಯ ಎದುರಾಗದಂತೆ ನೋಡಿಕೊಂಡರು. ಅಂತೆಯೇ ದುರ್ಬಲ ಎಸೆತಗಳನ್ನು ದಂಡಿಸುತ್ತಾ ಭರ್ಜರಿ ಶತಕದ ಜೊತೆಯಾಟ ನೀಡಿದರು.
ತಂಡದ ಮೊತ್ತ 118 ರನ್ ಗಳಾಗಿದ್ದಾಗ ಫಕರ್ ಝಮಾನ್ ರಷೀದ್ ಬೌಲಿಂಗ್ ನಲ್ಲಿ ಕ್ಯಾಚಿತ್ತು ಹೊರ ನಡೆದರು. ಆದರೆ ಈ ಹಂತದಲ್ಲಿ ಬಾಬರ್ ಅಜಮ್ ಜೊತೆಗೂಡಿ ತಮ್ಮ ನೈಜ ಆಟ ಮುಂದುವರೆಸಿದ ಅಜರ್ ಅಲಿ 76 ರನ್ ಗಳಿಸಿ ಔಟ್ ಆದರು. ಬಳಿಕ ಬಂದ ಮಹಮದ್ ಹಫೀಜ್ (31 ರನ್) ಗೆಲುವಿನ ಔಪಚಾರಿಕತೆಯನ್ನು ಪೂರ್ಣಗೊಳಿಸಿದರು. ಅಂತಿಮವಾಗಿ ಪಾಕಿಸ್ತಾನ ತಂಡ 37.1 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು. ಅಂತೆಯೇ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಅಂತೆಯೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೇರಿತು.
ಇನ್ನು ಇಂಗ್ಲೆಂಡ್ ನ ಪ್ರಮುಖ 3 ವಿಕೆಟ್ ಪಡೆದು ಪಾಕಿಸ್ತಾನ ಮೇಲುಗೈ ಸಾಧಿಸುವಂತೆ ಮಾಡಿದ ಬೌಲರ್ ಹಸನ್ ಅಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್Pakistanಪಾಕಿಸ್ತಾನಇಂಗ್ಲೆಂಡ್EnglandICC Champions Trophyಐಸಿಸಿ ಚಾಂಪಿಯನ್ಸ್ ಟ್ರೋಫಿ1st Semifinalಮೊದಲ ಸೆಮಿಫೈನಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


