32 ವರ್ಷಗಳ ಬಳಿಕ ಏಕದಿನ ಫೈನಲ್‌ನಲ್ಲಿ ಇಂಡೋ-ಪಾಕ್ ಮುಖಾಮುಖಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿ ನಿರ್ಣಾಯಕ ಹಂತ ತಲುಪಿದ್ದು, ಬರೊಬ್ಬರಿ 32 ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಕದಿನ ಮಾದರಿಯ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಹಂತ ತಲುಪಿವೆ.

ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿ ನಿರ್ಣಾಯಕ ಹಂತ ತಲುಪಿದ್ದು, ಬರೊಬ್ಬರಿ 32 ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಕದಿನ ಮಾದರಿಯ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಹಂತ ತಲುಪಿವೆ.
ಈ ಹಿಂದೆ 2007ರ ಟಿ20 ವಿಶ್ವಕಪ್ ಫೈನಲ್ ನಲ್ಲಿ ಉಭಯ ತಂಡಳು ಭೇಟಿಯಾಗಿತ್ತಾದರೂ, ಏಕದಿನ ಮಾದರಿಯ ಕ್ರಿಕೆಟ್ ನಲ್ಲಿ 32 ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಇದೇ ಮೊದಲ ಬಾರಿಗೆ ಎದುರಾಗುತ್ತಿವೆ. ಕೊನೆಯ ಬಾರಿಗೆ ಭಾರತ ಮತ್ತು ಪಾಕಿಸ್ತಾನ ತಂಡಗಳು 1985ರಲ್ಲಿ ನಡೆದ ವಿಶ್ವ ಚಾಂಪಿಯನ್ ಶಿಪ್ ಫೈನಲ್‌ನಲ್ಲಿ ಕಾದಾಡಿದ್ದವು. ಆ ಪಂದ್ಯಾವಳಿಯಲ್ಲೂ ಭಾರತ, ತಾನಾಡಿದ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿತ್ತು. ಆನಂತರ ಫೈನಲ್ ನಲ್ಲೂ ಗೆಲುವು ಪಡೆದಿತ್ತು.
ಪ್ರಸ್ತುತ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲೂ ಭಾರತ ತಾನಾಡಿದ ಮೊದಲ ಪಂದ್ಯದಲ್ಲಿ ಇದೇ ಪಾಕಿಸ್ತಾನ ತಂಡದ ವಿರುದ್ಧ ಗೆಲುವು ಸಾಧಿಸಿದ್ದು, ಮತ್ತೆ ಫೈನಲ್ ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸುತ್ತಿರುವುದು ಗಮನಾರ್ಹ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


