ದಾಖಲೆ ಬರೆದ ಇಂಡೋ-ಪಾಕ್ ಪಂದ್ಯ: 201 ಮಿಲಿಯನ್ ವೀಕ್ಷಕರಿಂದ ಚಾಂಪಿಯನ್ಸ್ ಟ್ರೋಫಿ ಲೀಗ್ ಪಂದ್ಯ ವೀಕ್ಷಣೆ!
ತೀವ್ರ ಕುತೂಹಲ ಕೆರಳಿಸಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಫೈನಲ್ ಪಂದ್ಯಕ್ಕೆ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಬೆನ್ನಲ್ಲೇ ಈ ಹಿಂದೆ ಚಾಂಪಿಯನ್ಸ್ ಟ್ರೋಫಿ ಸರಣಿಯ ಲೀಗ್ ಹಂತ ಇಂಡೋ-ಪಾಕ್ ಪಂದ್ಯ ದಾಖಲೆ ಪ್ರಮಾಣದ ವೀಕ್ಷಕರನ್ನು ಸೆಳೆದಿದೆ.

ಲಂಡನ್: ತೀವ್ರ ಕುತೂಹಲ ಕೆರಳಿಸಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಫೈನಲ್ ಪಂದ್ಯಕ್ಕೆ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಬೆನ್ನಲ್ಲೇ ಈ ಹಿಂದೆ ಚಾಂಪಿಯನ್ಸ್ ಟ್ರೋಫಿ ಸರಣಿಯ ಲೀಗ್ ಹಂತ ಇಂಡೋ-ಪಾಕ್ ಪಂದ್ಯ ದಾಖಲೆ ಪ್ರಮಾಣದ ವೀಕ್ಷಕರನ್ನು ಸೆಳೆದಿದೆ.
ಪ್ರತೀ ಬಾರಿಯಂತೆಯೇ ಈ ಬಾರಿಯೂ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ದಾಖಲೆ ಬರೆದಿದ್ದು, ಚಾಂಪಿಯನ್ಸ್ ಟ್ರೋಫಿ ಲೀಗ್ ಹಂತದ ಪಂದ್ಯ ದಾಖಲೆ ಪ್ರಮಾಣದ ವೀಕ್ಷಕರನ್ನು ಸೆಳೆದಿದೆ. ಮೂಲಗಳ ಪ್ರಕಾರ ಲೀಗ್ ಹಂತದ ಪಂದ್ಯವನ್ನು ವಿಶ್ವಾದ್ಯಂತ ಬರೊಬ್ಬರಿ 201 ಮಿಲಿಯನ್ ವೀಕ್ಷ ಕರು ನೋಡಿದ್ದಾರೆ ಎಂದು ತಿಳಿದುಬಂದಿದೆ.
ಖ್ಯಾತ ವೀಕ್ಷಕ ದತ್ತಾಂಶ ಸಂಗ್ರಹ ಸಂಸ್ಥೆ ಬಾರ್ಕ್ ಸಂಸ್ಥೆಯ ದತ್ತಾಂಶಗಳ ಅನ್ವಯ ಭಾರತ ಮತ್ತು ಪಾಕಿಸ್ತಾನ ನಡುವಿನ ಒಂದೇ ಪಂದ್ಯವನ್ನು ಬರೊಬ್ಬರಿ 201 ಮಿಲಿಯನ್ ವೀಕ್ಷಕರು ವೀಕ್ಷಿಸಿದ್ದರೆ, ಪಂದ್ಯದ ಮೊದಲಾರ್ಧದ ಪಂದ್ಯವನ್ನು ಬರೊಬ್ಬರಿ 294 ಮಿಲಿಯನ್ ವೀಕ್ಷಕರು ವೀಕ್ಷಿಸಿದ್ದರು. 2013ರ ಚಾಂಪಿಯನ್ಸ್ ಟ್ರೋಫಿ ಸರಣಿಯ ಪಂದ್ಯದ ವೀಕ್ಷಕರೆ ಸಂಖ್ಯೆಗಿಂತ ಈ ಬಾರಿ ವೀಕ್ಷಕರ ಸಂಖ್ಯೆ ದುಪ್ಪಟ್ಟಾಗಿತ್ತು ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಕ್ತಾರರು, ಈ ಹಿಂದಿನ ಟೂರ್ನಿಗಳಿಗಿಂತ ಈ ಭಾರಿಯ ಸರಣಿ ಅತೀ ಹೆಚ್ಚು ಪ್ರೇಕ್ಷಕರನ್ನು ಸೆಳೆದಿದೆ. ಪ್ರಮುಖವಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಪ್ರೇಕ್ಷಕರ ದತ್ತಾಂಶದಲ್ಲಿ ಹೊಸ ದಾಖಲೆ ನಿರ್ಮಿಸಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


