ಚಾಂಪಿಯನ್ಸ್ ಟ್ರೋಫಿ 2017: ಗೆಲ್ಲಲು ಪಾಕ್ ಮೊದಲು ಬ್ಯಾಟಿಂಗ್ ಮಾಡಬೇಕು- ಇಮ್ರಾನ್ ಖಾನ್
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಗೆಲವು ಸಾಧಿಸಬೇಕೆಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಬೇಕು ಎಂದು ಪಾಕಿಸ್ತಾನ ತಂಡದ ಮಾಜಿ ಕ್ಯಾಪ್ಟನ್ ಹಾಗೂ ಹಾಲಿ ರಾಜಕಾರಣಿ ಇಮ್ರಾನ್ ಖಾನ್ ಅವರು ಭಾನುವಾರ...

Published On :
ಇಸ್ಲಾಮಾಬಾದ್: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಗೆಲವು ಸಾಧಿಸಬೇಕೆಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಬೇಕು ಎಂದು ಪಾಕಿಸ್ತಾನ ತಂಡದ ಮಾಜಿ ಕ್ಯಾಪ್ಟನ್ ಹಾಗೂ ಹಾಲಿ ರಾಜಕಾರಣಿ ಇಮ್ರಾನ್ ಖಾನ್ ಅವರು ಭಾನುವಾರ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಅಂತಿಮ ಹಣಾಹಣಿಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಟಾಸ್ ಗೆದ್ದಿದ್ದೇ ಆದರೆ, ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಉತ್ತಮ ಬೌಲಿಂಗ್ ಮೂಲಕ ಕಡಿಮೆ ಮೊತ್ತಕ್ಕೆ ಭಾರತವನ್ನು ಕಟ್ಟಿ ಹಾಕಬೇಕು ಎಂದು ಸಲಹೆ ನೀಡಿದ್ದಾರೆ.
ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದರಿಂದ ಯಾವುದೇ ಒತ್ತಡಗಳೂ ಇರುವುದಿಲ್ಲ. ನಮ್ಮ ಬೌಲಿಂಗ್ ಕಠಿಣವಾಗಿರಬೇಕು. ನಮ್ಮಲ್ಲಿನ ಬೌಲಿಂಗ್ ನಮ್ಮ ಶಕ್ತಿಯಾಗಬೇಕು. ಮೊದಲಿನ ಪಂದ್ಯದಲ್ಲಿ ಮಾಡಿದ್ದ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಇಮ್ರಾನ್ ಖಾನ್Imran KhanPakistanಪಾಕಿಸ್ತಾನICC Champions Trophy 2017ಐಸಿಸಿ ಚಾಂಪಿಯನ್ಸ್ ಟ್ರೋಫಿ 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


