ಐಸಿಸಿ ಚಾಂಪಿಯನ್ಸ್ ಟ್ರೋಫಿ: ಫೈನಲ್ ಕದನದ ಗೆಲುವಿಗಾಗಿ ದೇಶಾದ್ಯಂತ ಅಭಿಮಾನಿಗಳಿಂದ ಹೋಮ-ಹವನ!
ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಗೆಲುವಿಗಾಗಿ ದೇಶಾದ್ಯಂತ ಅಭಿಮಾನಿಗಳು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸುತ್ತಿದ್ದಾರೆ.

ಲಂಡನ್: ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಗೆಲುವಿಗಾಗಿ ದೇಶಾದ್ಯಂತ ಅಭಿಮಾನಿಗಳು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸುತ್ತಿದ್ದಾರೆ.
ಸಾಮಾನ್ಯವಾಗಿ ಭಾರತ-ಪಾಕಿಸ್ತಾನ ಪಂದ್ಯ ನಡೆದರೇ ಅಭಿಮಾನಿಗಳ ದಂಡೇ ನೆರೆಯುತ್ತದೆ. ಅಂತುಹುದರಲ್ಲಿ ಮಿನಿ ವಿಶ್ವಕಪ್ ಎಂದೇ ಖ್ಯಾತಿಗಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಎದುರಾಗಿರುವುದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಇದೇ ಕಾರಣಕ್ಕೆ ದೇಶದ ಕೋಟ್ಯಂತರ ಅಭಿಮಾನಿಗಳು ಭಾರತ ತಂಡದ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡುತ್ತಿದ್ದಾರೆ.
ದೇಶದ ಮೂಲೆ ಮೂಲೆಯಲ್ಲಿರುವ ಅಭಿಮಾನಿಗಳು ವಿಶೇಷ ಪೂಜೆ, ಪ್ರಾರ್ಥನೆಯಲ್ಲಿ ತೊಡಗಿದ್ದು, ಕೋಲ್ಕತಾದ ಕಾಳಿಮಾತ ದೇಗುಲದಲ್ಲಿ ಅಭಿಮಾನಿಗಳು ಭಾರತದ ಗೆಲುವಿಗಾಗಿ ಮತ್ತು ಗಡಿಯಲ್ಲಿರುವ ಯೋಧರ ರಕ್ಷಣೆಗಾಗಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಅಂತೆಯೇ ಕೆಲ ಹಿಂದೂ ಸನ್ಯಾಸಿಗಳು ವಾರಣಾಸಿಯಲ್ಲಿ ಭಾರತದ ಗೆಲುವಿಗಾಗಿ ಗಂಗಾ ಪೂಜಾ ಕಾರ್ಯಕ್ರಮ ನಡೆಸಿದ್ದು, ಇದೇ ವಾರಣಾಸಿಯಲ್ಲಿರುವ ಮುಸ್ಲಿಂ ಬಾಂಧವರು ಕೂಡ ಭಾರತ ತಂಡದ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ರಂಜಾನ್ ಮಾಸವಾಗಿರುವುದರಿಂದ ಪ್ರಾರ್ಥನೆ ವ್ಯರ್ಥವಾಗುವುದಿಲ್ಲ ಖಂಡಿತಾ ಭಾರತ ತಂಡ ಜಯಿಸುತ್ತದೆ ಎಂದು ಮುಸ್ಲಿಂ ಬಾಂಧವರು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


