ಕ್ರಿಕೆಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪೈನಲ್ ನಲ್ಲಿ ಭಾರತಕ್ಕೆ ಗೆಲುವು?: ಜ್ಯೋತಿಷಿಗಳು ಹೇಳಿದ್ದೇನು?

ಭಾರಿ ನಿರೀಕ್ಷೆ ಹುಟ್ಟಿಸಿರುವ ಮತ್ತು ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುವಂತೆ ಮಾಡಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಲಿದೆ ಎಂದು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪೈನಲ್ ನಲ್ಲಿ ಭಾರತಕ್ಕೆ ಗೆಲುವು?: ಜ್ಯೋತಿಷಿಗಳು ಹೇಳಿದ್ದೇನು?
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರಿ ನಿರೀಕ್ಷೆ ಹುಟ್ಟಿಸಿರುವ ಮತ್ತು ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುವಂತೆ ಮಾಡಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಲಿದೆ ಎಂದು  ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ.

ಖಾಸಗಿ ಪತ್ರಿಕೆಯೊಂದು ವರದಿ ಮಾಡಿರುವಂತೆ ದೇಶದ ಖ್ಯಾತ ಜ್ಯೋತಿಷಿಗಳು ಈ ಬಗ್ಗೆ ಭವಿಷ್ಯ ನಡಿದಿದ್ದು, ಇಂದಿನ ಫೈನಲ್ ಪಂದ್ಯದಲ್ಲಿ ಭಾರತವೇ ಗೆಲುವು ಸಾಧಿಸಲಿದೆಯಂತೆ. ಅಂಕಿ ಅಂಶಗಳು ಮತ್ತು ಪಿಚ್ ರಿಪೋರ್ಟ್  ಅನ್ವಯ ಓವಲ್ ಪಿಚ್ ಬ್ಯಾಟಿಂಗ್ ನೆರವಾಗಲಿದ್ದು, ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಭಾರತ ಈ ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಆದರೆ ಇದೇ ಅಭಿಪ್ರಾಯವನ್ನು ಬೇರೊಂದು ಧಾಟಿಯಲ್ಲಿ ಜ್ಯೋತಿಷಿಗಳು ವ್ಯಕ್ತಪಡಿಸಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ನಾಯಕ ಎಂಎಸ್ ಧೋನಿ ಅವರ ಜಾತಕದ ಅನ್ಪಯ ಭಾರತ ಈ ಪಂದ್ಯದಲ್ಲಿ  ಗೆಲುವು ಸಾಧಿಸಲಿದೆ ಎಂದು ಹೇಳಲಾಗುತ್ತಿದೆ. ಅದು ಮಾತ್ರವಲ್ಲದೇ ಕೋಚ್ ಅನಿಲ್ ಕುಂಬ್ಳೆ ಅವರ ಜಾತಕ ಕೂಡ ಗೆಲುವಿನ ಮುನ್ಸೂಚನೆ ನೀಡುತ್ತಿದೆ ಎಂದು ಜ್ಯೋತಿಷಿಯೊಬ್ಬರು ಹೇಳಿದ್ದಾರೆ.

ಧೋನಿ ಹಾಗೂ ಕುಂಬ್ಳೆ ಜಾತಕದಲ್ಲಿ ಶುಕ್ರ ಬಲಿಷ್ಟನಾಗಿದ್ದು, ಕುಂಬ್ಳೆ ಜಾತಕದಲ್ಲಿ ಮಂಗಳನೂ ಶುಭಕಾರಕನಾಗಿದ್ದಾನೆ. ಹೀಗಾಗಿ ಫೈನಲ್ ಪಂದ್ಯದಲ್ಲಿ ಭಾರತ ಜಯಭೇರಿ ಭಾರಿಸಲಿದೆ ಎಂದು ಜ್ಯೋತಿಷಿಗಳು  ಅಭಿಪ್ರಾಯಪಟ್ಟಿದ್ದಾರೆ.

ಆದರೆ ಯಾವ ಜ್ಯೋತಿಷಿ ಏನೇ ಹೇಳಿದರೂ, ಇಂದಿನ ಪಂದ್ಯದಲ್ಲಿ ಯಾವ ತಂಡ ಉತ್ತಮವಾಗಿ ಆಡುತ್ತದೆಯೇ ಆ ತಂಡ ಮಾತ್ರ ಗೆಲುವು ಸಾಧಿಸಲಿದೆ. ಉತ್ತಮ ಪ್ರದರ್ಶನದೊಂದಿಗೆ ಅದೃಷ್ಟ ಕೂಡ ಮುಖ್ಯ ಎಂಬುದು ಕ್ರಿಕೆಟ್  ಪಂಡಿತರ ಅಭಿಪ್ರಾಯ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.