ಕ್ರಿಕೆಟ್

ಪಾಕಿಸ್ತಾನ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್

ಓವಲ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 180 ರನ್ ಗಳ ಅಂತರದಲ್ಲಿ ಮಣಿಸಿದ ಪಾಕಿಸ್ತಾನ ತನ್ನ ಚೊಚ್ಚಲ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಪಾಕಿಸ್ತಾನ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್
ಕ್ರಿಕ್ ಇನ್ಫೋ ಚಿತ್ರ
Published On :
ಲಂಡನ್: ಓವಲ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 180 ರನ್ ಗಳ ಅಂತರದಲ್ಲಿ ಮಣಿಸಿದ ಪಾಕಿಸ್ತಾನ ತನ್ನ ಚೊಚ್ಚಲ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.
ಪಾಕಿಸ್ತಾನ ನೀಡಿದ್ದ 339 ರನ್ ಗಳ ಗುರಿ ಬೆನ್ನು ಹತ್ತಿದ ಭಾರತಕ್ಕೆ ಪಾಕ್ ವೇಗಿ ಮಹಮದ್ ಆಮಿರ್ ಅಕ್ಷರಶಃ ದುಸ್ವಪ್ನವಾಗಿ ಕಾಡಿದರು. ಆರಂಭದಲ್ಲೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಔಟ್ ಮಾಡಿದ ಆಮಿರ್ ಭಾರತಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ನೀಡಿದರು. ಬಳಿಕ ಯುವರಾಜ್ ಸಿಂಗ್ ಕೂಡ ಶದಾಬ್ ಖಾನ್ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು. ಮತ್ತೊಂದು ತುದಿಯಲ್ಲಿದ್ದ ಧೋನಿ ಹಸನ್ ಅಲಿ ಬೌಲಿಂಗ್ ನಲ್ಲಿ ಔಟ್ ಆಗುವುದರೊಂದಿಗೆ ಭಾರತದ ಗೆಲುವಿನ ಕನಸು ಕಮರಿತು. 
ಆದರೆ ಈ ಹಂತದಲ್ಲಿ ಕ್ರೀಸ್ ಗೆ ಆಗಮಿಸಿದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಪಾಕಿಸ್ತಾನಕ್ಕೆ ಕೊಂಚ ಪ್ರತಿರೋಧ ಒಡ್ಡಿ ಅರ್ಧಶತಕ ಸಿಡಿಸಿದರು. ಈ ಹಂತದಲ್ಲಿ ಪಾಂಡ್ಯಾ ಕೂಡ ರನ್ ಔಟ್ ಗೆ ಬಲಿಯಾದರು. ಬಳಿಕ ಯಾವೊಬ್ಬ ಬ್ಯಾಟ್ಸಮನ್ ಕೂಡ ಕ್ರೀಸ್ ನಲ್ಲಿ ಗಟ್ಟಿಯಾಗಿ ನಿಲ್ಲುವ ಪ್ರಯತ್ನ ಮಾಡಲಿಲ್ಲ. ಪರಿಣಾಮ ಭಾರತ 30.3 ಓವರ್ ಗಳಲ್ಲಿ 158 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. 
ಪಾಕಿಸ್ತಾನದ ಪರ ಆಮಿರ್ ಮತ್ತು ಹಸನ್ ಅಲಿ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಶದಾಬ್ ಖಾನ್ 2 ಹಾಗೂ ಜುನೈದ್ ಖಾನ್ 1 ವಿಕೆಟ್ ಪಡೆದರು.
ಇದೇ ಮೊದಲ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದ್ದ ಪಾಕಿಸ್ತಾನ ತಂಡ ಪ್ರಶಸ್ತಿ ಗೆಲ್ಲುವ ಮೂಲಕ ತನ್ನ ದೇಶದ ಅಭಿಮಾನಿಗಳಿಗೆ ರಂಜಾನ್ ಉಡುಗೊರೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.