ಪಾಕ್ ವಿರುದ್ಧ ತಿರುಗಿ ಬಿದ್ದ ಪಾಂಡ್ಯಾ, ಗಿಲ್ ಕ್ರಿಸ್ಟ್ ದಾಖಲೆ ಪತನ!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ತಿರುಗಿ ಬಿದ್ದು, ಭರ್ಜರಿ ಆಟವಾಡಿದ್ದ ಭಾರತದ ಹಾರ್ದಿಕ್ ಪಾಂಡ್ಯಾ ದಾಖಲೆಯೊಂದನ್ನು ಬರೆದಿದ್ದು, ಏಕದಿನ ಕ್ರಿಕೆಟ್ ನಲ್ಲಿ ವೇಗದ ಅರ್ಧಶತಕ ಸಿಡಿಸಿದ್ದಾರೆ.

ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ತಿರುಗಿ ಬಿದ್ದು, ಭರ್ಜರಿ ಆಟವಾಡಿದ್ದ ಭಾರತದ ಹಾರ್ದಿಕ್ ಪಾಂಡ್ಯಾ ದಾಖಲೆಯೊಂದನ್ನು ಬರೆದಿದ್ದು, ಏಕದಿನ ಕ್ರಿಕೆಟ್ ನಲ್ಲಿ ವೇಗದ ಅರ್ಧಶತಕ ಸಿಡಿಸಿದ್ದಾರೆ.
ನಿನ್ನೆ ಲಂಡನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಾ 43 ಎಸೆತಗಳಲ್ಲಿ 76 ರನ್ ಸಿಡಿಸಿದ್ದರು. ಅವರ ಈ ಭರ್ಜರಿ ಆಟದಲ್ಲಿ ಆರು ಸಿಕ್ಸರ್ ಹಾಗೂ 4 ಬೌಂಡರಿ ಸಿಡಿಸಿದ್ದರು. ಈ ಮೂಲಕ ವೇಗದ ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಡಂ ಗಿಲ್ ಕ್ರಿಸ್ಟ್ ಹೆಸರಲ್ಲಿ ಈ ದಾಖಲೆ ಇತ್ತು. 1999ರ ವಿಶ್ವಕಪ್ ಟೂರ್ನಿಯಲ್ಲಿ ಗಿಲ್ ಕ್ರಿಸ್ಟ್ 33 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಆದರೆ ನಿನ್ನೆ ಪಾಂಡ್ಯಾ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಗಿಲ್ ಕ್ರಿಸ್ಟ್ ದಾಖಲೆಯನ್ನು ಮುರಿದಿದ್ದಾರೆ.
ಇನ್ನು ನಿನ್ನೆ ಫೈನಲ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 180 ರನ್ ಗಳ ಅಂತರದ ಹೀನಾಯ ಸೋಲು ಕಂಡಿತ್ತು. ಪಾಕಿಸ್ತಾನ ನೀಡಿದ್ದ 339 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಭಾರತ ತಂಡ ಕೇವಲ 158 ರನ್ ಗಳಿಗೆ ಆಲ್ ಔಟ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


