ಸೋಲಿನ ನಡುವೆಯೂ ವಿಶೇಷ ದಾಖಲೆ ಬರೆದ ಯುವರಾಜ್ ಸಿಂಗ್!
ಲಂಡನ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪೈನಲ್ ಪಂದ್ಯದಲ್ಲಿ ಭಾರತದ ಹೀನಾಯ ಸೋಲಿನ ನಡುವೆಯೂ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ವಿಶಿಷ್ಠ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ.

ಲಂಡನ್: ಲಂಡನ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪೈನಲ್ ಪಂದ್ಯದಲ್ಲಿ ಭಾರತದ ಹೀನಾಯ ಸೋಲಿನ ನಡುವೆಯೂ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ವಿಶಿಷ್ಠ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ.
ಐಸಿಸಿ ಆಯೋಜನೆಯ ಟೂರ್ನಮೆಂಟ್ ಗಳಲ್ಲಿ ಪೈಕಿ ಅತೀ ಹೆಚ್ಚು ಫೈನಲ್ ಪಂದ್ಯಗಳನ್ನಾಡಿದ ಸಾಧನೆಯನ್ನು ಯುವರಾಜ್ ಮಾಡಿದ್ದು, ಈ ವರೆಗೂ ಯುವಿ ಒಟ್ಟು 7 ಫೈನಲ್ ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. 17 ವರ್ಷಗಳ ಹಿಂದೆ 2000ನೇ ಇಸವಿಯಲ್ಲಿ ಮೊದಲ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದ ಯುವಿ ಅದೇ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಫೈನಲ್ ಪಂದ್ಯವನ್ನಾಡಿದ್ದರು. ಬಳಿಕ 2002ರ ಚಾಂಪಿಯನ್ಸ್ ಟ್ರೋಫಿ, 2003ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ, 2007ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ, 2011ರ ವಿಶ್ವಕಪ್ ಟೂರ್ನಿ, 2014ರ ಐಸಿಸಿ ವಿಶ್ವಕಪ್ ಟೂರ್ನಿ ಮತ್ತು 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ಶ್ರೀಲಂಕಾದ ಕುಮಾರ ಸಂಗಕ್ಕಾರ, ಮಹೇಲಾ ಜಯವರ್ಧನೆ, ಮುತ್ತಯ್ಯ ಮುರಳೀಧರನ್ ಅತೀ ಹೆಚ್ಚು ಫೈನಲ್ ಪಂದ್ಯವನ್ನಾಡಿದ್ದ ದಾಖಲೆ ಹೊಂದಿದ್ದರು.
ಅಂತೆಯೇ ಇದೇ ಟೂರ್ನಿಯಲ್ಲಿ ಯುವಿ ತಮ್ಮ 300ನೇ ಏಕದಿನ ಪಂದ್ಯವನ್ನೂ ಪೂರೈಸಿದರು. ಇದೀಗ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವಾಡುವ ಮೂಲಕ ಅತಿ ಹೆಚ್ಚು ಫೈನಲ್ ಪಂದ್ಯಗಳನ್ನಾಡಿರುವ ಆಟಗಾರ ಎನಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


