ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ

ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಟೀಂ ಇಂಡಿಯಾ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ
ಅನಿಲ್ ಕುಂಬ್ಳೆ
Published On :
ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಹೀನಾಯ ಸೋಲಿನ ಬಳಿಕ ಇದೀಗ ಅನಿಲ್ ಕುಂಬ್ಳೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಣಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆಯಾಗಿದ್ದ ಅನಿಲ್ ಕುಂಬ್ಳೆ ಸದ್ಯ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳದಿರಲು ತೀರ್ಮಾನಿಸಿದ್ದಾರೆ. 
ಅನಿಲ್ ಕುಂಬ್ಳೆ ಅವರು ಆಟಗಾರರೊಂದಿಗೆ ಉದ್ಧಟತನದಿಂದ ವರ್ತಿಸುತ್ತಾರೆ. ಅಗೌರವದಿಂದ ನಡೆದುಕೊಳ್ಳುತ್ತಾರೆ ಎಂದು ಟೀಂ ಇಂಡಿಯಾ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಬಿಸಿಸಿಐ ನೂತನ ಕೋಚ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಿತ್ತು. ಅಂತೆ ವೀರೇಂದ್ರ ಸೆಹ್ವಾಗ್ ಸೇರಿದಂತೆ ಹಲವರು ಕೋಚ್ ಹುದ್ದೆಗೆ ಅರ್ಜಿ ಹಾಕಿದ್ದರು. 
ಆದರೆ ಮುಂದಿನ ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಕೋಚ್ ಆಗಿ ಅನಿಲ್ ಕುಂಬ್ಳೆ ಅವರೇ ಮುಂದುವರೆಯಲಿ ಎಂದು ಕ್ರಿಕೆಟ್ ಸಲಹಾ ಸಮಿತಿ ಬಿಸಿಸಿಐಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಕುಂಬ್ಳೆ ಇಂದು ತೆರಳಬೇಕಿತ್ತು ಆದರೆ ಕಾರಣಾಂತರದಿಂದ ಅವರು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.