ಧೋನಿ, ಯುವರಾಜ್ ಬದಲಿಗೆ ಯುವ ಆಟಗಾರರಿಗೆ ಅವಕಾಶ ಸಿಗಲಿ: ದ್ರಾವಿಡ್
2019ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ತಂಡದಲ್ಲಿ ಹಿರಿಯ ಆಟಗಾರರಾದ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅಗತ್ಯತೆಯ ನಿರ್ಧಾರವನ್ನು...

Published On :
ನವದೆಹಲಿ: 2019ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ತಂಡದಲ್ಲಿ ಹಿರಿಯ ಆಟಗಾರರಾದ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅಗತ್ಯತೆಯ ಕುರಿತು ನಿರ್ಧಾರವನ್ನು ಕೈಗೊಳ್ಳಬೇಕಿದೆ ಎಂದು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಹೀನಾಯ ಸೋಲಿನ ಬಳಿಕ ತಂಡದಲ್ಲಿ ಹಿರಿಯ ಆಟಗಾರರ ಅಗತ್ಯತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಹೀಗಿದ್ದರು ಆಯ್ಕೆಗಾರರು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಈ ಇಬ್ಬರು ಆಟಗಾರರನ್ನು ಆಯ್ಕೆ ಮಾಡಿದೆ. ಭಾರತೀಯ ಕ್ರಿಕೆಟ್ ಚಿತ್ರಣವನ್ನು ಗಮನಿಸಿದರೆ ಮುಂದಿನ ಕೆಲ ವರ್ಷಗಳು ಈ ಆಟಗಾರರು ತಂಡದಲ್ಲಿರುತ್ತಾರೆ ಎಂದು ತಿಳಿಯುತ್ತದೆ ಎಂದು ದ್ರಾವಿಡ್ ಹೇಳಿದ್ದಾರೆ.
ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಬಲಿಷ್ಠ ತಂಡವನ್ನು ಆಯ್ಕೆ ಮಾಡಲಾಗಿದೆ. ಆದರೆ ತಂಡದಲ್ಲಿ ಯುವ ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡಲು ಅವಕಾಶ ನೀಡಬೇಕು. ಆಗ ಮಾತ್ರ ಅವರು ಹೆಚ್ಚು ಸಮರ್ಥರಾಗಲು ಸಾಧ್ಯವಾಗುತ್ತದೆ. ಒಂದು ವೇಳೆ ಯುವ ಆಟಗಾರರಿಗೆ ಆಡಲು ಹೆಚ್ಚು ಅವಕಾಶ ನೀಡದೆ ಅತ್ಯುನ್ನತ ಟೂರ್ನಿಗಳಲ್ಲಿ ಅವಕಾಶ ನೀಡಿದರೆ ಅಂತಹ ಸಮಯದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತದೆ ಎಂದು ದ್ರಾವಿಡ್ ಹೇಳಿದ್ದಾರೆ.
ಧೋನಿ ಮತ್ತು ಯುವರಾಜ್ ಸಿಂಗ್ ಅವರಿಗೆ ತಂಡದಲ್ಲಿ ಆಡಲು ಅವಕಾಶ ಸಿಕ್ಕರು ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ? ಅವರು ಫಿಟ್ ಆಗಿದ್ದಾರಾ ಎಂದು ನೋಡಬೇಕು. ಒಂದು ವೇಳೆ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದರೆ ಆಗ ಈ ಮಾತು ಬರುವುದಿಲ್ಲ. ಧೋನಿ, ಯುವಿರಂತೆ ಹಿರಿಯ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶ ನೀಡಿಲ್ಲ ಎಂದು ದ್ರಾವಿಡ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


