ಇನ್ನು 2 ವರ್ಷಕ್ಕೂ ಟೀಂ ಇಂಡಿಯಾ 'ಎ', ಯು-19ಗೂ ದ್ರಾವಿಡ್ ಕೋಚ್ ಆಗಿ ಮುಂದುವರಿಕೆ
ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮುಂದಿನ ಎರಡು ವರ್ಷಕ್ಕೂ ಟೀಂ ಇಂಡಿಯಾ 'ಎ' ಹಾಗೂ ಅಂಡರ್ 19 ತಂಡಕ್ಕೂ ಕೋಚ್ ಆಗಿ ಮುಂದುವರೆಯಲಿದ್ದಾರೆ...

Published On :
ನವದೆಹಲಿ: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮುಂದಿನ ಎರಡು ವರ್ಷಕ್ಕೂ ಟೀಂ ಇಂಡಿಯಾ 'ಎ' ಹಾಗೂ ಅಂಡರ್ 19 ತಂಡಕ್ಕೂ ಕೋಚ್ ಆಗಿ ಮುಂದುವರೆಯಲಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ಟೀಂ ಇಂಡಿಯಾ 'ಎ' ಹಾಗೂ ಅಂಡರ್ 19 ತಂಡದ ಕೋಚ್ ಆಗಿ ದ್ರಾವಿಡ್ ಅವರ ಎರಡು ವರ್ಷಗಳ ಗುತ್ತಿಗೆ ವಿಸ್ತರಣೆಗೆ ಅಸ್ತು ಅಂದಿದೆ.
ಸಿಎಸಿಯ ಸದಸ್ಯರಾದ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಅವರು ದ್ರಾವಿಡ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಹೀಗಾಗಿ ಅವರ ಗುತ್ತಿಗೆ ಅವಧಿ ವಿಸ್ತರಣೆ ಮಾಡಲಾಗುವುದು ಎಂದರು. ಇನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರಂತೆ ದ್ರಾವಿಡ್ ಸಂದರ್ಶನ ಎದುರಿಸಬೇಕಿಲ್ಲ ಎಂದು ಹೇಳಿದ್ದಾರೆ.
ಬಿಸಿಸಿಐ ಮೂಲಗಳ ಪ್ರಕಾರ ರಾಹುಲ್ ದ್ರಾವಿಡ್ ಅವರು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಒಪ್ಪಂದವನ್ನು ಕೈಬಿಡಲಿದ್ದಾರೆ ಎಂದು ತಿಳಿಸಿವೆ.
ಜುಲೈನಲ್ಲಿ ಭಾರತ ಅಂಡರ್ 19 ತಂಡ ಇಂಗ್ಲೆಂಡ್ ಅಂಡರ್ 19 ತಂಡದೊಂದಿಗೆ ಎರಡು ನಾಲ್ಕು ದಿನದ ಪಂದ್ಯ ಹಾಗೂ ಐದು ಏಕದಿನ ಪಂದ್ಯಗಳನ್ನು ಆಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


