ಮಹಿಳಾ ವಿಶ್ವಕಪ್ ಕ್ರಿಕೆಟ್: ವಿಶ್ವ ದಾಖಲೆ ಬರೆದ ಮಿಥಾಲಿ ರಾಜ್!
ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಶುಭಾರಂಭ ಮಾಡಿರುವಂತೆಯೇ ತಂಡದ ನಾಯಕಿ ಮಿಥಾಲಿ ರಾಜ್ ತಮ್ಮ ಅದ್ಬುತ ಫಾರ್ಮ್ ಮೂಲಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

Published On :
ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಶುಭಾರಂಭ ಮಾಡಿರುವಂತೆಯೇ ತಂಡದ ನಾಯಕಿ ಮಿಥಾಲಿ ರಾಜ್ ತಮ್ಮ ಅದ್ಬುತ ಫಾರ್ಮ್ ಮೂಲಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಿಥಾಲಿ ಕೇವಲ 73 ಎಸೆತಗಳಲ್ಲಿ 71 ರನ್ ಸಿಡಿಸಿ ಆಕರ್ಷಕ ಅರ್ಧಶತಕ ದಾಖಲಿಸಿದ್ದರು. ಇದು ಅವರ ವೃತ್ತಿ ಜೀವನದ 47ನೇ ಅರ್ಧಶತಕವಾಗಿದ್ದು, ಅಂತೆಯೇ ಈ ಸಾಲಿನ ಸತತ 7ನೇ ಅರ್ಧಶತಕವಾಗಿದೆ. ಆ ಮೂಲಕ ಮಿಥಾಲಿ ರಾಜ್ ಸತತ ಏಳು ಅರ್ಧಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
1999ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ ರಾಜ್ ಅವರು ಈ ವರೆಗೂ 178 ಏಕದಿನ ಪಂದ್ಯಗಳನ್ನಾಡಿದ್ದು, 52.25 ಸರಾಸರಿಯಲ್ಲಿ 5852 ರನ್ ಸಿಡಿಸಿದ್ದಾರೆ. ಈ ಪೈಕಿ 5 ಶತಕ ಹಾಗೂ 47 ಅರ್ಧಶತಕಗಳನ್ನು ಸಿಡಿಸಿದ್ದಾರೆ.
Seventh consecutive ODI fifty for Mithali Raj...a world record. An absolute legend of Indian cricket.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Londonಲಂಡನ್indiaಭಾರತಐಸಿಸಿಇಂಗ್ಲೆಂಡ್EnglandICCMithali Rajಮಿಥಾಲಿ ರಾಜ್ಮಹಿಳಾ ವಿಶ್ವಕಪ್Cricket Offbeatಕ್ರಿಕೆಟ್ ಸ್ವಾರಸ್ಯWomen\'s World cup
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


