ಮಹಿಳಾ ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ!
ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತದ ವನಿತೆಯರ ತಂಡ ಶುಭಾರಂಭ ಮಾಡಿದ್ದು, ಇಂಗ್ಲೆಂಡ್ ತಂಡದ ವಿರುದ್ಧ 35 ರನ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ.

Published On :
ಲಂಡನ್: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತದ ವನಿತೆಯರ ತಂಡ ಶುಭಾರಂಭ ಮಾಡಿದ್ದು, ಇಂಗ್ಲೆಂಡ್ ತಂಡದ ವಿರುದ್ಧ 35 ರನ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ.
ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿಯೂ ಚಾಕಚಕ್ಯತೆಯ ಪ್ರದರ್ಶನ ನೀಡಿದ ಭಾರತದ ವನಿತೆಯರು ಅರ್ಹವಾಗಿಯೇ ಇಂಗ್ಲೆಂಡ್ ವಿರುದ್ಧ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಟಾಸ್ ಸೋತ ಇಂಗ್ಲೆಂಡ್ ತಂಡ ಮೊದಲು ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಭಾರತಕ್ಕೆ ಆರಂಭಿಕ ಆಟಗಾರ್ತಿಯರಾದ ರಾತ್ ಮತ್ತು ಮಂದನಾ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ ಬರೊಬ್ಬರಿ 144 ರನ್ ಗಳ ಜೊತೆಯಾಟ ನೀಡಿದ್ದ ಈ ಜೋಡಿಯನ್ನು ನೈಟ್ ಬೇರ್ಪಡಿಸಿದರು. ಅಷ್ಟು ಹೊತ್ತಿಗಾಗಲೇ 90 ರನ್ ಸಿಡಿಸಿ ಶತಕದ ಆಂಚಿನಲ್ಲಿದ್ದರು. ಬಳಿಕ ನಾಯಕಿ ಮಿಥಾಲ್ ರಾಜ್ ಜೊತೆಗೂಡಿದ ರಾತ್ 86 ರನ್ ಗಳಿಸಿ ಹೇಜಲ್ ಗೆ ವಿಕೆಟ್ ಒಪ್ಪಿಸಿದರು.
ನಾಯಕಿ ಮಿಥಾಲಿ ರಾಜ್ ಅವರು 71 ರನ್ ಸಿಡಿಸಿ ಇನ್ನಿಂಗ್ಸ್ ನ ಅಂತಿಮ ಓವರ್ ನ ಅಂತಿಮ ಎಸೆತದಲ್ಲಿ ನೈಟ್ ಗೆ ವಿಕೆಟ್ ಒಪ್ಪಿಸಿದರು. ಆ ಮೂಲಕ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 281 ರನ್ ಗಳಿಸಿತು.
ಈ ಮೊತ್ತವನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಕೇವಲ 246 ರನ್ ಗಳಿಗೆ ಸರ್ವಪತನ ಕಂಡಿತು. ನೈಟ್ 46 ರನ್ ಮತ್ತು ವಿಲ್ಸನ್ ಅವರು 81 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರ್ತಿಯರಿಂದ ಅಂತಹ ಪ್ರಭಾವಿ ಪ್ರದರ್ಶನ ಮೂಡಿಬರಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡ 47.3 ಓವರ್ ಗಳಲ್ಲಿ 246 ರನ್ ಗಳಿಸಿ ಆಲ್ ಔಟ್ ಆಯಿತು. ಆ ಮೂಲಕ ಭಾರತ ತಂಡ 35 ರನ್ ಗಳ ಅಂತರದಿಂದ ಜಯಭೇರಿ ಭಾರಿಸಿತು.
ಭಾರತದ ಪರ ಬ್ಯಾಟಿಂಗ್ ನಲ್ಲಿ 90 ರನ್ ಸಿಡಿಸಿದ ಮಂದನಾ ಪಂದ್ಯ ಶ್ರೇಷ್ಟ ಆಟಗಾರ್ತಿ ಪ್ರಶಸ್ತಿಗೆ ಪಾತ್ರರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


