ಫೇಸ್‍ಬುಕ್‍ನಲ್ಲಿ 35 ಮಿಲಿಯನ್ ಹಿಂಬಾಲಕರನ್ನು ಹೊಂದುವ ಮೂಲಕ 2ನೇ ಸ್ಥಾನಕ್ಕೇರಿದ ಕೊಹ್ಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಜನಪ್ರಿಯತೆ ದಿನದಿಂದ ದಿನಕ್ಕೆ ಅಗಾಧವಾಗಿ ಬೆಳೆಯುತ್ತಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವಿರಾಟ್ ಕೊಹ್ಲಿ...

Published On :
ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಜನಪ್ರಿಯತೆ ದಿನದಿಂದ ದಿನಕ್ಕೆ ಅಗಾಧವಾಗಿ ಬೆಳೆಯುತ್ತಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವಿರಾಟ್ ಕೊಹ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಹಿಂದಿಕ್ಕಿದ್ದಾರೆ.
ಪ್ರಸ್ತುತ ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 42 ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ಅಗ್ರಸ್ಥಾನದಲ್ಲಿದ್ದು 35 ಮಿಲಿಯನ್ ಫಾಲೋವರ್ಸ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು 29 ಮಿಲಿಯನ್ ಹಿಂಬಾಲಕರನ್ನು ಹೊಂದುವ ಮೂಲಕ ಬಾಲಿವುಡ್ ನಟ ಸಲ್ಮಾನ್ ಖಾನ್ ಮೂರನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ ಪಂದ್ಯದಿಂದ ಪಂದ್ಯಕ್ಕೆ ತಮ್ಮ ಬ್ಯಾಟಿಂಗ್ ನಲ್ಲಿ ಮತ್ತಷ್ಟು ದೃಢತೆ ಹಾಗೂ ಕ್ಷಮತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದು ಇದೇ ಕಾರಣದಿಂದಾಗಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಲು ಸಾಧ್ಯವಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


