ಕ್ರಿಕೆಟ್

ಬೆಂಗಳೂರು ಗಲ್ಲಿಯಲ್ಲಿ ಆಟೋ ಓಡಿಸಿದ ಮೈಕೆಲ್ ಕ್ಲಾರ್ಕ್

ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ತಂಡದ ಸದ್ಯ ಬೆಂಗಳೂರಿನಲ್ಲಿ ಮಾರ್ಚ್ 4ರಿಂದ ಆರಂಭಗೊಳ್ಳಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ನಗರಕ್ಕೆ ಆಗಮಿಸಿದ್ದು ಆಸೀಸ್ ತಂಡದ...

ಬೆಂಗಳೂರು ಗಲ್ಲಿಯಲ್ಲಿ ಆಟೋ ಓಡಿಸಿದ ಮೈಕೆಲ್ ಕ್ಲಾರ್ಕ್
ಮೈಕೆಲ್ ಕ್ಲಾರ್ಕ್
Published On :
ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ತಂಡದ ಸದ್ಯ ಬೆಂಗಳೂರಿನಲ್ಲಿ ಮಾರ್ಚ್ 4ರಿಂದ ಆರಂಭಗೊಳ್ಳಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ನಗರಕ್ಕೆ ಆಗಮಿಸಿದ್ದು ಆಸೀಸ್ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಆಟೋ ರಿಕ್ಷಾ ಓಡಿಸಿ ಎಲ್ಲರ ಗಮನ ಸೆಳೆದರು. 
ಆಟೋ ಚಾಲಕ ನೀಡಿದ ಮಾರ್ಗದರ್ಶನದಂತೆ ಕ್ಲಾಕ್ ಕೆಲ ಹೊತ್ತು ಆಟೋ ಚಲಾಯಿಸಿದರು. ಇದರ ವಿಡಿಯೋ ತುಣುಕನ್ನು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಾಕಿರುವ ಕ್ಲಾರ್ಕ್ ಟುಕ್ ಟುಕ್ ಡ್ರೈವಿಂಗ್ ಕಲೆಯನ್ನು ಕಲಿತೆ, ಟೆಸ್ಟ್ ಕ್ರಿಕೆಟ್ ಜೀವನ ಆರಂಭಿಸಿದ ಬೆಂಗಳೂರಿಗೆ ಮತ್ತೆ ಆಗಮಿಸಿದ್ದು ಖುಷಿಯಾಗಿದೆ ಎಂದು ಬರೆದುಕೊಂಡಿದ್ದಾರೆ. 
ಮೈಕೆಲ್ ಕ್ಲಾರ್ಕ್ 2004ರಲ್ಲಿ ಚಿನ್ನಸ್ವಾಮಿಯಲ್ಲಿ ನಡೆದ ಟೆಸ್ಟ್ ನಲ್ಲಿ ಪದಾರ್ಪಣೆ ಮಾಡಿದ್ದರು. ಈ ಪಂದ್ಯದಲ್ಲಿ ಭರ್ಜರಿ 151 ರನ್ ಸಿಡಿಸಿ ಆಸೀಸ್ ತಂಡಕ್ಕೆ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.