ಟೀಂ ಇಂಡಿಯಾಗೆ ಆರಂಭಿಕ ಆಘಾತ, ಕನ್ನಡಿಗ ಕೆಎಲ್ ರಾಹುಲ್ ಆಸರೆ
ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆರಂಭಿಕ ಆಘಾತವಾಗಿದ್ದು ಪ್ರಮುಖ ಐದು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ...

Published On :
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆರಂಭಿಕ ಆಘಾತವಾಗಿದ್ದು ಪ್ರಮುಖ ಐದು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಮೊದಲ ದಿನದಾಟದ ಚಹಾ ವಿರಾಮಕ್ಕೆ 59 ಓವರ್ ನಲ್ಲಿ ಐದು ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿದೆ. ಈ ಮಧ್ಯೆ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಉತ್ತಮವಾಗಿ ಆಡುತ್ತಿದ್ದು ಅಜೇಯ 74 ರನ್ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.
ಆರಂಭಿಕರಾಗಿ ಬಂದ ಅಭಿನವ್ ಮುಕುಂದ್ ಶೂನ್ಯಕ್ಕೆ ಔಟಾದರು, ಬಳಿಕ ಬಂದ ಚೇತೇಶ್ವರ ಪೂಜಾರ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದರು 17 ರನ್ ಗಳಿಸಿದ್ದಾಗ ನಾಥನ್ ಲ್ಯಾನ್ ಎಸತೆದಲ್ಲಿ ಹ್ಯಾಂಡ್ಸ್ ಕೂಮ್ಬ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬಂದ ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟಾಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ತಾಳ್ಮೆಯ ಆಟಗಾರ ಅಜಿಂಕ್ಯ ರಹಾನೆ 17, ಕರುಣ್ ನಾಯರ್ 26 ರನ್ ಗಳಿಸಿ ಔಟಾದರು.
ಆಸ್ಟ್ರೇಲಿಯಾ ಪರ ನಾಥನ್ ಲ್ಯಾನ್ 3, ಸ್ಟಾರ್ಕ್ ಓ ಕೇಫೆ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


