ಕ್ರಿಕೆಟ್

ಬೆಂಗಳೂರು ಟೆಸ್ಟ್: ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 276 ಆಲೌಟ್

ಭಾರತ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 276 ರನ್ ಗಳಿಗೆ ಆಲೌಟ್ ಆಗಿದೆ...

ಬೆಂಗಳೂರು ಟೆಸ್ಟ್: ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 276 ಆಲೌಟ್
ಟೀಂ ಇಂಡಿಯಾ
Published On :
ಬೆಂಗಳೂರು: ಭಾರತ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 276 ರನ್ ಗಳಿಗೆ ಆಲೌಟ್ ಆಗಿದೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 276 ರನ್ ಗಳಿಗೆ ಆಲೌಟ್ ಆಗಿದ್ದು 87 ರನ್ ಗಳ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟ ಪ್ರಾರಂಭಿಸಿದ ವಾಡೆ ಅಜೇಯ 40 ರನ್ ಗಳಿಸಿ ಔಟಾದರೆ ಸ್ಟಾರ್ಕ್ 26 ರನ್ ಗಳಿಸಿ ಔಟಾದರು.
ಎರಡನೇ ದಿನದಾಟ ಪ್ರಾರಂಭಿಸಿದ ಡೇವಿಡ್ ವಾರ್ನರ್ ಮತ್ತು ಮ್ಯಾಟ್ ರೆನ್ ಶಾ ಉತ್ತಮ ಆರಂಭ ತಂದುಕೊಟ್ಟರು. 33 ರನ್ ಗಳಿಸಿದ್ದಾಗ ವಾರ್ನರ್ ಅಶ್ವಿನ್ ಎಸೆತದಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ಬಳಿಕ ಬಂದ ಸ್ಮಿತ್ 8 ರನ್ ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ 
ಬಂದ ಮಾರ್ಷ್ ಉತ್ತಮವಾಗಿ ಬ್ಯಾಟ್ ಬೀಸಿದ್ದು 66 ರನ್ ಗಳಿಸಿದರು. ಹ್ಯಾಂಡ್ಸ್ ಕೂಂಬ್ 16 ರನ್ ಮತ್ತು ಮಿಚೆಲ್ ಮಾರ್ಷ್ 0 ರನ್ ಗಳಿಸಿ ಔಟಾದರು. 
ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 6, ಅಶ್ವಿನ್ 2, ಇಶಾಂತ್ ಶರ್ಮಾ, ಉಮೇಶ್ ಯಾದವ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.